ಮೈಸೂರು: ನಾನು, ಎಚ್.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.
ಎಚ್.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್, ಗಣೇಶ್ ಪ್ರಸಾದ್ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…