ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ.
ಹರಿಯಾಣದ ಭಿವಾನಿಯಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಇದೀಗ ಒಂದು ರಾಷ್ಟ್ರ ಒಂದು ಚುನಾವಣೆ ಗಿಮ್ಮಿಕ್ ನೊಂದಿಗೆ ಬಂದಿದೆ. ಒಂದು ಅಥವಾ 10, 12 ಚುನಾವಣೆಗಳಿಂದ ನಮಗೆ ಏನು ಸಿಗುತ್ತದೆ. ನಮಗೆ ‘ಒಂದು ರಾಷ್ಟ್ರ, ಒಂದು ಶಿಕ್ಷಣ’ ಬೇಕು. ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ಸಿಗಬೇಕು. ನಮಗೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಬೇಡ. ಒಂದು ಚುನಾವಣೆ ಅಥವಾ 1000 ಚುನಾವಣೆಗಳು ನಮಗೆ ಮುಖ್ಯವಲ್ಲ ಎಂದರು.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ ದೆಹಲಿ ಸಿಎಂ, ಇಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ಏನು ಸಿಗುತ್ತದೆ ಎಂದು ಕುತೂಹಲ ವ್ಯಕ್ತಪಡಿಸಿದರು. “ದೇಶಕ್ಕೆ ಯಾವುದು ಮುಖ್ಯ? ಎಂದು ಪ್ರಶ್ನಿಸಿದ ಅವರು, ಒಂದು ರಾಷ್ಟ್ರ ಒಂದು ಚುನಾವಣೆ ಅಥವಾ ಒಂದು ರಾಷ್ಟ್ರ ಒಂದು ಶಿಕ್ಷಣ (ಶ್ರೀಮಂತ ಅಥವಾ ಬಡವರು ಎಲ್ಲರಿಗೂ ಸಮಾನವಾದ ಉತ್ತಮ ಶಿಕ್ಷಣ) ಒಂದು ರಾಷ್ಟ್ರ ಒಂದು ಟ್ವೀಟ್ ಮೆಂಟ್ ( ಶ್ರೀಮಂತ ಅಥವಾ ಬಡವ ಎಲ್ಲರಿಗೂ ಸಮಾನ ಗೌರವ) ಒಂದು ರಾಷ್ಟ್ರ ಒಂದು ಚುನಾವಣೆಯಿಂದ ಸಾಮಾನ್ಯ ಜನರು ಏನು ಪಡೆಯಲಿದ್ದಾರೆ ಎಂದು ಪ್ರಶ್ನಿಸಿದರು.
ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ಕಾರ್ಯ ಸಾಧ್ಯತೆ ಕುರಿತು ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ಅದರ ಪರ ಹಾಗೂ ವಿರುದ್ಧ ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಆಡಳಿತರೂಢ ಬಿಜೆಪಿ ಬೆಂಬಲಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದರೆ, ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…