BREAKING NEWS

ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ಹೇಗೆಲ್ಲ ಕಾರ್ಯ ನಿರ್ವಹಿಸಬೇಕು ಅಂತ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದ ಮೇಲೆ ನಾಳೆ (ಮಂಗಳವಾರ)  ತಡರಾತ್ರಿ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಶಿಗ್ಗಾಂವಿದಲ್ಲಿ ಸ್ಪರ್ಧೆ ಮಾಡುತ್ತೇನೆ. ಬೇರೆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಅಲ್ಲದೇ ಹಾಲಿ ಶಾಸಕರಿಗೆ ಕೊಕ್ ನೀಡಲಾಗುತ್ತದೆ ಅನ್ನುವುದು ಉಹಾಪೋಹ. ನಮ್ಮ ಬಿಜೆಪಿಯಲ್ಲಿ  ಕೆಲವು  ಮಾನದಂಡಗಳಿವೆ. ಅದೇ ಪ್ರಕಾರ ನಾವು ಕೆಲಸ ಮಾಡುತ್ತೇವೆ ಎಂದರು.

ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಅಂತಿಮ ಆಗುತ್ತದೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ, ಈ ಬಗ್ಗೆಯೂ ಚರ್ಚೆ ಆಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

lokesh

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago