ಮೈಸೂರು: ‘ಇಲ್ಲಿನ ವಿಮಾನನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ’ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.
ಮೈಸೂರು ವಿಮಾನನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಹೇಳಿಕೆ ವೈಯಕ್ತಿಕವಾದುದೇ ಹೊರತು, ಪಕ್ಷ ಅಥವಾ ಸರ್ಕಾರದ ನಿಲುವಲ್ಲ. ಅಭಿಮಾನದಿಂದ ಆ ಹೇಳಿಕೆ ನೀಡಿದ್ದಾರಷ್ಟೆ’ ಎಂದು ಸ್ಪಷ್ಟಪಡಿಸಿದರು.
‘ಟಿಪ್ಪು ಹೆಸರಿಡುತ್ತೇವೆ ಎಂದು ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಾಗಲಿ ಹೇಳಿಲ್ಲ. ನಾವೂ ಕೇಳಿಲ್ಲ. ಹೀಗಿರುವಾಗ, ಸಂಸದ ಪ್ರತಾಪ ಸಿಂಹ ಅವರು ಈ ವಿಷಯದಲ್ಲೂ ರಾಜಕಾರಣ ಮಾಡುತ್ತಿರುವುದು ಹಾಗೂ ಟಿಪ‍್ಪು ಹೆಸರಿಡಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ’ ಎಂದರು.
ಸಿದ್ದರಾಮಯ್ಯ ಅವರು 2015ರಲ್ಲೇ ಕೇಂದ್ರಕ್ಕೆ ಪತ್ರ ಬರೆದಿದ್ದರು. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆಯೂ ತಿಳಿಸಿದ್ದರು. ಆಗಿನಿಂದಲೂ ಕೇಂದ್ರ ಸರ್ಕಾರ ಮರುನಾಮಕರಣ ಮಾಡಲಿಲ್ಲವೇಕೆ?, ಸಂಸದರಾಗಿರುವ ಪ್ರತಾಪ ಸಿಂಹ ಒತ್ತಾಯಿಸಲಿಲ್ಲವೇಕೆ, ಎಂಟು ವರ್ಷಗಳಿಂದ ಅವರು ಎಲ್ಲಿ ಮಲಗಿದ್ದರು?’ ಎಂದು ಕೇಳಿದರು.
‘ಮೊದಲಿಗ ಶಿಫಾರಸು ಮಾಡಿದ್ದೇ ನಾವು. ಇದ್ಯಾವುದೂ ಗೊತ್ತಿಲ್ಲದೇ ಸಂಸದರು ವಿನಾಕಾರಣ ಆರೋಪಿಸುವುದು ಸರಿಯಲ್ಲ. ಶಿಫಾರಸು ಪತ್ರವನ್ನು ಮತ್ತೊಮ್ಮೆ ಕಳುಹಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…