BREAKING NEWS

ಗೊಂದಲಗಳ್ನು ಸರಿಪಡಿಸಿ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ : ಬಿ.ವೈ.ವಿಜಯೇಂದ್ರ !

ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ರಾಷ್ಟ್ರೀಯ ಪಕ್ಷ ವಾದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ. ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತಿದ್ದೇವೆ. ಈಶ್ವರಪ್ಪ ಅವರ ಸಮಸ್ಯೆ ಕೂಡ ಬಗೆಹರೆಯುತ್ತದೆ ಎಂಬ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ನಾಯಕರ ಸಮ್ಮುಖದಲ್ಲೇ ತೀರ್ಮಾನವಾಗಿದೆ : ಟಿಕೆಟ್‌ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾತು ಕೇಳಿಕೊಂಡು ತೀರ್ಮಾನಗಳನ್ನು ಕೈಗೊಳ್ಳುವ ನಾಯಕತ್ವ ನಮ್ಮದಲ್ಲ. ಕೇಂದ್ರದಲ್ಲಿ ಮೋದಿ, ಅಮಿತ್‌ ಶಾ, ನಡ್ಡ ಅವರಂತಹ ಬಲಿಷ್ಠ ನಾಯಕರಿದ್ದಾರೆ. ಇವರೆಲ್ಲರೂ ರಾಜ್ಯ ನಾಯಕರ ಸಮ್ಮುಖದಲ್ಲೇ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೇವಲ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾಡಿರುವ ತೀರ್ಮಾನ ಅಲ್ಲ ಎಂದು ತಿಳಿಸಿದರು.

ದಾಖಲೆ ಅಂತರದಲ್ಲಿ ಗೆಲ್ಲುತೇವೆ : ದಾಖಲೆ ಅಂತರದಿಂದ ಮೈಸೂರು-ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ. ಆ ವಿಶ್ವಾಸದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಮತದಾರರೂ ಇದ್ದಾರೆ. ನರೇಂದ್ರ ಮೋದಿ ಅವರ ಮೇಲಿರುವ ಪ್ರೀತಿಯ ಪರಿಣಾಮ ಮೈತ್ರಿ ಪಕ್ಷಗಳು ರಾಜ್ಯದ ಎಲ್ಲಾ ಕ್ಷೇತ್ರದಲ್ಲೂ ಗೆಲುತ್ತದೆ.

ಸಂಕಲ್ಪ ಈಡೇರಿಸಲು ಚಾಮುಂಡೇಶ್ವರಿಗೆ ಪ್ರರ್ಥನೆ : ರಾಜ್ಯದಲ್ಲಿ ಭೀಕರ ಬರಗಾಲ ಇದೆ. ೪೦೦ ಸ್ಥಾನಗಳನ್ನು ಪಡೆಯುವ ಮೂಲಕ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸುಭದ್ರ ಸರ್ಕಾರ ನಿರ್ಮಾಣ ಆಗಬೇಕು . ಪ್ರಧಾನಿ ತಮ್ಮ ಗುರಿ ತಲುಪಬೇಕು. ರಾಜ್ಯದ ಮೈತ್ರಿಕೂಟ ೨೮ ಕ್ಷೇತ್ರದಲ್ಲಿ ಗೆದ್ದು ಪ್ರಧನಿ ಕೈ ಬಲ ಪಡಿಸಬೇಕು. ಈ ಎಲ್ಲಾ ಸಂಕಲ್ಪ ಈಡೇರಿಸಲು ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಜನಪ್ರೀಯತೆ ಕಳೆದುಕೊಂಡ ಸರ್ಕಾರ : ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಮುಖಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಳ ಸಂಪೂರ್ಣವಾಗಿ ಗಾಬರಿಯಾಗಿದ್ದಾರೆ. ಯಾವುದೋ ಒಂದು ಭ್ರಮೆಯಲ್ಲಿದ್ದ ಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಳಕ್ಕೆ ಇಂದು ಜ್ಞಾನೋದಯವಾಗಿದೆ. ರಾಜ್ಯ ಸರ್ಕಾರ ಶೂನ್ಯ ಸಾಧನೆ ಮಾಡಿದೆ. ಯಾವುದೇ ಅಭಿವೃದ್ದಿ ಮಾಡ ಈ ಸರ್ಕಾರ ರಾಜ್ಯದ ಬಡವರು, ರೈತರು ಹಾಗೂ ಹಿಂದುಳಿದವರಿಗೆ ಶಾಪವಾಗಿ ಪರಿಣಮಿಸಿದೆ.

ಒಂದು ರೀತಿ ರಾಜ್ಯ ಸರ್ಕಾರವೇ ತನ್ನ ವಿಶವಾಸವನ್ನು ಕಳೆದುಕೊಂಡಿದೆ. ದೇಶದಲ್ಲೇ ಕಡಿಮೆ ಅವಧಿಯಲ್ಲಿ ಜನಪ್ರೀಯತೆ ಕಳೆದುಕೊಂಡ ಸರ್ಕಾರ ಇದ್ದರೆ ಅದು ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ. ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago