BREAKING NEWS

ಮೈಸೂರು, ಚಾ.ನಗರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವು ಖಚಿತ: ಸಿ.ಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ಕೈಗೆ ಬರಲೇಬೇಕು, ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.

ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು‌ ವಿಶ್ವಾಸದಿಂದ ನುಡಿದರು.

ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು‌. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು. ‌

ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.

ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

28 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

33 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago