ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.
ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್‌ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.
ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…