BREAKING NEWS

ವಕೀಲರೊಂದಿಗೆ ಚರ್ಚಿಸಿ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ : ಪ್ರಜ್ವಲ್‌ ರೇವಣ್ಣ

ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.

ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್‌ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.

ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago