ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದು, ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅಭಿಪ್ರಾಯವೂ ಬಹಳ ಮುಖ್ಯವಾಗಿದ್ದು, ಸದ್ಯ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ. ದಯವಿಟ್ಟು ಸಾರ್ವಜನಿಕರು ತಮ್ಮ ಸಲಹೆ ಅಭಿಪ್ರಾಯಗಳನ್ನು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ವಿಕಾಸಸೌಧದಲ್ಲಿ ಬ್ರಾಂಡ್ ಬೆಂಗಳೂರು ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ” ಬೆಂಗಳೂರಿನ ನಾಗರೀಕರು ಹಾಗೂ ವಿದೇಶದಲ್ಲಿರುವ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು www.brandbengaluru.karnataka.gov.in ವೆಬ್ ಸೈಟ್ ನಲ್ಲಿ ನಿಗದಿತ ಕಾಲಮಿತಿ ಜೂನ್ 30 ರ ಒಳಗಾಗಿ ನೀಡಬೇಕು ಎಂದು ವಿನಂತಿಸುತ್ತೇನೆ ” ಎಂದರು.
ಪಾದಾಚಾರಿ ಮಾರ್ಗ ಒತ್ತೂವರಿ: ನಗರದಲ್ಲಿ ಪಾದಚಾರಿ ರಸ್ತೆ ಒತ್ತುವರಿಯಿಂದ ಟ್ರಾಫಿಕ್ ಸಮಸ್ಯೆ ಆಗುತ್ತಿದೆ, ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ನಗರದ ರಸ್ತೆಗಳು 100 ಅಡಿಯ ರಸ್ತೆಗಳಲ್ಲ. ಬದಲಾಗಿ ಚಿಕ್ಕ ರಸ್ತೆಗಳೇ ನಗರದಲ್ಲಿ ಹೆಚ್ಚಾಗಿ ಇವೆ. ಹಾಗಂತ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದರು. ನಾನು ಖುದ್ದು ನೋಡಿದ್ದೇನೆ, ನಗರದಲ್ಲಿ ಪಾದಚಾರಿ ರಸ್ತೆಗಳು ಒತ್ತುವರಿಯಾಗಿದೆ. ಪಾದಚಾರಿ ರಸ್ತೆಯಲ್ಲೇ ಸಾಕಷ್ಟು ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಇದರಿಂದ ಜನರು ರಸ್ತೆಗಳಲ್ಲಿ ಓಡಾಟ ಮಾಡುತ್ತಾರೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತೆ ಎಂದು ವಿವರಿಸಿದರು.
ಈಗಾಗಲೇ ಬಂದಿರುವ ಸಲಹೆಗಳೇನು?: ಶಾಸಕರು, ಅಧಿಕಾರಿಗಳು, ಅಂಬಾಸಿಡರ್ ಗಳ ಸಭೆಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈ ಡೆನ್ಸಿಟಿ ಕಾರಿಡಾರ್, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣದಂತಹ ಸಲಹೆ ನೀಡಿದ್ದಾರೆ.
ಸ್ವಚ್ಛತೆ, ಪರಿಸರ ವಿಚಾರದಲ್ಲಿ ಕಸ ವಿಲೇವಾರಿ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಕೊಳಗೇರಿ ಪ್ರದೇಶ ಅಭಿವೃದ್ಧಿ ಸೇರಿದಂತೆ ದಕ್ಷ ಆಡಳಿತ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.
ಬೊಮ್ಮಾಯಿ ಮನೆಗೂ ಹೋಗಿ ಸಲಹೆ; ಈ ಮಧ್ಯೆ ಕೆಲವು ದೊಡ್ಡ ನಾಯಕರ ಮನೆಗೆ ಹೋಗಿ ಚರ್ಚೆ ಮಾಡಲು ತೀರ್ಮಾನಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಇನ್ನು ಕೆಲವರನ್ನು ಭೇಟಿ ಮಾಡಬೇಕು. ಬೊಮ್ಮಾಯಿ ಅವರ ಸಮಯ ಕೇಳಿದ್ದು, ಅವರು ಬ್ಯುಸಿ ಇದ್ದ ಕಾರಣ ಭೇಟಿ ಮಾಡಿಲ್ಲ. ಅವರ ವಿಚಾರಧಾರೆಗಳನ್ನು ತಿಳಿಯಬೇಕು.
2-3 ನೇ ದರ್ಜೆಯ ನಗರಗಳ ಅಭಿವೃದ್ಧಿ: ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ಇದೆ. 50 ಲಕ್ಷದಷ್ಟು ಮಂದಿ ಬೆಂಗಳೂರಿಗೆ ಬಂದು ಹೋಗುತ್ತಿದ್ದಾರೆ. ರಾಜ್ಯ ಹಾಗೂ ದೇಶಕ್ಕೆ ಬೆಂಗಳೂರಿನಿಂದ ಹೆಚ್ಚಿನ ಪ್ರಮಾಣದ ಹಣ ತೆರಿಗೆ ರೂಪದಲ್ಲಿ ಹೋಗುತ್ತಿದೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದವರು ಮತ್ತೆ ತಮ್ಮ ಊರಿಗೆ ಹೋಗುತ್ತಿಲ್ಲ. ಇಲ್ಲೇ ನೆಲೆಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಬೆಂಗಳೂರಿನ ಹೊರೆ ತಪ್ಪಿಸಲು 2-3ನೇ ದರ್ಜೆ ನಗರಗಳ ಅಭಿವೃದ್ಧಿ, ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇವೆ.
ಎಲ್ಲಾ ಕೇಬಲ್ ಕಟ್ ಮಾಡಿಸುತ್ತೇನೆ: ಬೆಂಗಳೂರಿನ ಅನೇಕ ಕಡೆಗಳಲ್ಲಿ ಕೆಬಲ್ ಗಳ ರಾಶಿ ಕುರಿತು ಕೇಳಿದ ಪ್ರಶ್ನೆಗೆ, ‘ನಾನು ಇಂಧನ ಸಚಿವನಾಗಿದ್ದಾಗ ಕೇಬಲ್ ಹಾವಳಿ ನೋಡಿದ್ದೇವೆ. ತಮ್ಮನ್ನು ಯಾರೂ ಮುಟ್ಟಲು ಆಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ. ಈ ಬಗ್ಗೆ ಆಲೋಚನೆ ಮಾಡಲಾಗುತ್ತಿದ್ದು, ಮಾಧ್ಯಮಗಳು ಸಹಕಾರ ನೀಡಿದರೆ ಎಲ್ಲ ಕೇಬಲ್ ಕಟ್ ಮಾಡಿಸುತ್ತೇನೆ’ ಎಂದು ತಿಳಿಸಿದರು.
ಡಬಲ್ ಚೆಕ್ ಮಾಡಿ ಕಾಮಗಾರಿಗಳ ಪುನಾರಂಭ: ಸ್ಥಗಿತಗೊಂಡಿರುವ ಕಾಮಗಾರಿ ಪುನರಾರಂಭವಾಗುವುದು ಯಾವಾಗ ಎಂದು ಕೇಳಿದಾಗ, ‘ನಾನು ಎಲ್ಲಾ ಯೋಜನೆ ಡಬಲ್ ಚೆಕ್ ಮಾಡಿಸುತ್ತೇನೆ. ಕಾಮಗಾರಿ ಅಂದಾಜು ಪರಿಶೀಲನೆ ಮಾಡಿಸುತ್ತೇನೆ. ಎಲ್ಲವೂ ಸರಿಯಾಗಿದ್ದರೆ ಮಾತ್ರ ಪುನರಾರಂಭವಾಗಲಿದೆ. ಈ ವಿಚಾರವಾಗಿ ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಎಚ್ಚರಿಕೆ ನೀಡಿದ್ದೆ. ಯಾರು ಎಷ್ಟಾದರೂ ಕೂಗಿಕೊಳ್ಳಲಿ ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ’ ಎಂದು ತಿಳಿಸಿದರು.
ವರ್ಗಾವಣೆ ದಂಧೆ ಬಗ್ಗೆ ದೂರು ನೀಡಲಿ: ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಅವರು ತಡ ಮಾಡದೇ ಲೋಕಾಯುಕ್ತಕ್ಕೆ ದೂರು ನೀಡಲಿ’ ಎಂದು ತಿಳಿಸಿದರು.
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…
ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…
ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…