ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದಾರೆ. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತೆ : ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿರುವ ಎಚ್‌ಡಿಕೆ , ಪೆನ್ ಡ್ರೈವ್ ಕಳೆದಿಲ್ಲ ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿ ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಎಚ್‍ಡಿಕೆ, ಸನ್ಮಾನ್ಯ ಮುಖ್ಯಮಂತ್ರಿಗಳೇ, ವೀಡಿಯೊ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ ನೀವು ಆರುವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಸಿಎಂ ಕಚೇರಿಯಲ್ಲಿ ಯಾವ ಅಧಿಕಾರಿಗೆ ಯಾವ ಜವಾಬ್ದಾರಿ ಇದೆ ಎನ್ನುವುದರ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…