BREAKING NEWS

ನಿಮ್ಮ ಅಧಿಕಾರದ ಅಂಟು ರೋಗಕ್ಕೆ ಮದ್ದೇನು? : ಸಿದ್ದು ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದಾರೆ. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತೆ : ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿರುವ ಎಚ್‌ಡಿಕೆ , ಪೆನ್ ಡ್ರೈವ್ ಕಳೆದಿಲ್ಲ ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿ ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಎಚ್‍ಡಿಕೆ, ಸನ್ಮಾನ್ಯ ಮುಖ್ಯಮಂತ್ರಿಗಳೇ, ವೀಡಿಯೊ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ ನೀವು ಆರುವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಸಿಎಂ ಕಚೇರಿಯಲ್ಲಿ ಯಾವ ಅಧಿಕಾರಿಗೆ ಯಾವ ಜವಾಬ್ದಾರಿ ಇದೆ ಎನ್ನುವುದರ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

3 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

3 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

3 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

3 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

3 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

4 hours ago