ನವದೆಹಲಿ : ಮಾಹಿತಿ ತಂತ್ರಜ್ಞಾನದ ನಿಯಮಗಳಿಗೆ ಅನುಗುಣವಾಗಿ ಮೆಟಾ ಮಾಲಿಕತ್ವದ ವ್ಯಾಟ್ಸ್ ಆ್ಯಪ್ ಆಗಸ್ಟ್ ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವ್ಯಾಟ್ಸ್ ಆ್ಯಪ್ ನ ಭಾರತದ ಕುರಿತ ಇತ್ತೀಚೆಗಿನ ತಿಂಗಳ ವರದಿ ತಿಳಿಸಿದೆ.
ಇದರಲ್ಲಿ 35 ಲಕ್ಷ ಖಾತೆಗಳನ್ನು ಬಳಕೆದಾರರಿಂದ ಯಾವುದೇ ದೂರು ಬಾರದೇ ಇದ್ದರೂ ಕಂಪೆನಿ ಪೂರ್ವಭಾವಿಯಾಗಿ ನಿಷೇಧಿಸಿದೆ.
ಸ್ವೀಕರಿಸಲಾದ ಬಳಕೆದಾರರ ದೂರುಗಳು, ಅದಕ್ಕೆ ವ್ಯಾಟ್ಸ್ ಆ್ಯಪ್ ಕೈಗೊಂಡ ಕ್ರಮಗಳು, ವ್ಯಾಟ್ಸ್ ಆ್ಯಪ್ ನಲ್ಲಿ ನಿಂದನೆ ವಿರುದ್ಧ ಪ್ರತಿಬಂಧಕಾತ್ಮಕ ಕ್ರಮಗಳನ್ನು ತೆಗೆದುಕೊಂಡಿರುವ ವಿವರಗಳನ್ನು ಬಳಕೆದಾರರ ಸುರಕ್ಷಾ ವರದಿ ಒಳಗೊಂಡಿದೆ.
“ಆಗಸ್ಟ್ 1 ಹಾಗೂ 31ರ ನಡುವೆ ಒಟ್ಟು 7,420,748 ವ್ಯಾಟ್ಸ್ ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಇವುಗಳಲ್ಲಿ 3,506,905 ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ’’ ಎಂದು ಅದು ತಿಳಿಸಿದೆ. ದೂರವಾಣಿ ಸಂಖ್ಯೆಯ ಕೋಡ್ +91ರ ಮೂಲಕ ಭಾರತದ ಖಾತೆಗಳನ್ನು ಗುರುತಿಸಲಾಗಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…