ಹೊಸದಿಲ್ಲಿ: ಭಾರತದ ಅನೇಕ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ವಾಟ್ಸಾಪ್ ಸಂದೇಶ ಸೇವೆಯಲ್ಲಿ ಸಮಸ್ಯೆ ಉಂಟಾಗಿದೆ. ದೇಶದ ಅನೇಕ ಬಳಕೆದಾರರು ವಾಟ್ಸಾಪ್ ಬಳಕೆಯಲ್ಲಿ ತೊಂದರೆ ಉಂಟಾಗಿರುವುದನ್ನು ತಿಳಿಸಿದ್ದಾರೆ. ಬೇರೆ ದೇಶಗಳಲ್ಲಿಯೂ ಇದೇ ಸಮಸ್ಯೆ ಉಂಟಾಗಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ಜಗತ್ತಿನ ಅನೇಕ ದೇಶಗಳಲ್ಲಿ ವಾಟ್ಸಾಪ್ ಸಮಸ್ಯೆ ಉಂಟಾಗಿದೆ ಎಂದು ವರದಿಯಾಗಿದೆ.
ಭಾರತದ ಅನೇಕ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ವಾಟ್ಸಾಪ್ ಸಂದೇಶ ಸೇವೆಯಲ್ಲಿ ಸಮಸ್ಯೆ ಕಂಡುಬಂದಿದೆ. ಸಾವಿರಾರು ಬಳಕೆದಾರರು ತಮಗೆ ವಾಟ್ಸಾಪ್ ಬಳಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.





