BREAKING NEWS

ಕಾಂಗ್ರೆಸ್‌ ಪಾಲಿಗೆ ಚಾಣಕ್ಯ ಯಾರು ಈ ಸುನೀಲ್ ಕಾನುಗೋಲು..?

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ – ಹೊಸ ಕಾರ್ಯತಂತ್ರಗಳು ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ.

ಆಡಳಿತಾರೂಢ ಬಿಜೆಪಿ ವಿರುದ್ಧದ ಭ್ರಷ್ಟಾಚಾರ ಆರೋಪವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ ಸಮರ್ಥವಾಗಿ ಜನರ ಮುಂದೆ ಬಿಂಬಿಸುವಲ್ಲಿಯೂ ಯಶ ಕಂಡಿದೆ. ಇದರಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಲು ಪಾತ್ರವೂ ಬಹುಮುಖ್ಯವಾಗಿದೆ.

ಸುನಿಲ್ ಕಾನುಗೋಲು ಕರ್ನಾಟಕದವರೇ ಆಗಿದ್ದರೂ ಬೆಳೆದಿದ್ದು ನೆರೆಯ ತಮಿಳುನಾಡಿನ ಚೆನ್ನೈನಲ್ಲಿ. ಈ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರೊಂದಿಗೆ ಕೆಲಸ ಮಾಡಿದ್ದರು. 2014ರಲ್ಲಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಿಜೆಪಿಯ ಬಿಲಿಯನ್ ಮೈಂಡ್ಸ್ ಅಸೋಶಿಯೇಷನ್ (Association of Billion Minds – ABM) ಮುಖ್ಯಸ್ಥರಾಗಿಯೂ ಇವರು ಸೇವೆ ಸಲ್ಲಿಸಿದರು.

ಬಿಜೆಪಿಯ ಪರವಾಗಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಯಲ್ಲೂ ಚುನಾವಣಾ ಪ್ರಚಾರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ವಿಜಯಶಾಲಿಯಾಗಿತ್ತು. 2018ರಲ್ಲಿ ಕರ್ನಾಟಕದಲ್ಲೂ ಬಿಜೆಪಿ ಪರ ಇದೇ ಸುನಿಲ್ ಕಾನುಗೋಲು ಕೆಲಸವನ್ನೂ ಮಾಡಿದ್ದರು. ಆಗ ಅತಿದೊಡ್ಡ ಪಕ್ಷವಾಗಿ ಕಮಲ ಪಕ್ಷ ಹೊರಹೊಮ್ಮಿತ್ತು.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ತಂತ್ರಗಳನ್ನು ಸುನಿಲ್ ಕಾನುಗೋಲು ರೂಪಿಸಿದ್ದರು. ಕಳೆದ ವರ್ಷದ ಮಾರ್ಚ್ನಲ್ಲಿ ಅವರನ್ನು ಕಾಂಗ್ರೆಸ್ ನೇಮಿಸಿಕೊಂಡಿತ್ತು. ಇದಾದ ಎರಡು ತಿಂಗಳ ನಂತರ ಸೋನಿಯಾ ಗಾಂಧಿಯವರು ಕಾನುಗೋಲು ಅವರನ್ನು ಪಕ್ಷದ 2024ರ ಲೋಕಸಭಾ ಚುನಾವಣಾ ಕಾರ್ಯಪಡೆಯ ಸದಸ್ಯರನ್ನಾಗಿ ನೇಮಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಡೆದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಮುಖ ಪಾತ್ರವನ್ನು ಸುನಿಲ್ ಕಾನುಗೋಲು ವಹಿಸಿದ್ದರು. ಕರ್ನಾಟಕ ಮೂಲಕ ಸಾಗಿದ್ದ ಈ ಯಾತ್ರೆಯು ರಾಜ್ಯ ಚುನಾವಣೆಗೆ ಮುನ್ನ ಕಾಂಗ್ರೆಸ್ ಜನರೊಂದಿಗೆ ಸಂಪರ್ಕ ಸಾಧಿಸಲು ನೆರವಾಗಿತ್ತು. ಬಹುಮುಖ್ಯವಾಗಿ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದರು.

ತಮ್ಮದೇ ಆದ ಸಮೀಕ್ಷೆ ಮೂಲಕ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದ್ದರು. ಕೆಲವರನ್ನು ಹೊರತುಪಡಿಸಿ ಕಾನುಗೋಲು ತಂಡ ನಡೆಸಿದ ಸಮೀಕ್ಷೆಗಳ ಆಧಾರದ ಮೇಲೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.

ಮೋದಿ ವಿರುದ್ಧ ವೈಯಕ್ತಿಕ ಟೀಕೆ ಮಾಡದಂತೆ, ಹಿಂದು-ಮುಸ್ಲಿಂ ಕುರಿತಾದ ವಿಚಾರ ಮುನ್ನಲೆಗೆ ತರದಂತೆ ಈ ಟೀಮ್ ಸಲಹೆಯನ್ನೂ ನೀಡಿತ್ತು. ಅದರೊಂದಿಗೆ ಕೆಲವೊಂದು 70 ಸೀಟ್ಗಳಲ್ಲಿ ಕಾಂಗ್ರೆಸ್ನ ಸ್ಪರ್ಧೆ ನೆಪಮಾತ್ರ ಎನ್ನುವುದನ್ನೂ ಈ ಟೀಮ್ ತಿಳಿಸಿಬಿಟ್ಟಿತ್ತು. ಈ ಎಲ್ಲದರ ಯಶಸ್ಸು ಈಗ ಸಿಕ್ಕಿದೆ.

ಕಾಂಗ್ರೆಸ್ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳನ್ನು ನಡೆಸುವಲ್ಲಿ ಸುನಿಲ್ ಪ್ರಬಲ ತಂತ್ರಗಾರಿಕೆ ರೂಪಿಸಿದ್ದರು. ಈ ಹಿಂದೆ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪರವಾಗಿ ಕೆಲಸ ಮಾಡಿದ್ದರು.

ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ಗೆ ತನ್ನ ರಾಜಕೀಯ ನೆಲೆಯನ್ನು ಗಟ್ಟಿಗೊಳಿಸುವ ಅನಿರ್ವಾಯತೆ ಇದೆ. ಜೊತೆಗೆ ರಾಜಸ್ಥಾನ ಮತ್ತು ಛತ್ತೀಸ್ಗಢ ಚುನಾವಣೆಗಳಲ್ಲಿ ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳುವುದು ಹಾಗೂ ಮಧ್ಯಪ್ರದೇಶದಲ್ಲಿ ಅಧಿಕಾರ ಬರುವ ಮುಖ್ಯವಾದ ಸವಾಲು ಕೈ ಪಾಳಯದ ಮುಂದಿದೆ.

ಇಷ್ಟೇ ಅಲ್ಲ, ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸುವ ದೊಡ್ಡ ಸವಾಲು ಕಾಂಗ್ರೆಸ್ಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಪಕ್ಷಕ್ಕೆ ಸಿಕ್ಕಿರುವ ಸರಳ ಬಹುಮತದ ಗೆಲುವು ಮತ್ತು ಚುನಾವಣಾ ತಂತ್ರಗಾರಿಕೆಗಳು ಹೇಗೆ ಕೆಲಸ ಮಾಡುತ್ತವೆ ಎಂಬುವುದನ್ನು ಕಾದುನೋಡಬೇಕಿದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

14 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

14 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

16 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

18 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

21 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago