ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸಂಸದರೊಬ್ಬರ ಜತೆ ನಂಟು ಹೊಂದಿರುವ ಕಂಪನಿಗಳಿಂದ ಐಟಿ ಇಲಾಖೆ 300 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಅವರು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
ಬಿಜೆಪಿ ಪಕ್ಷ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದನ್ನು ಶೇರ್ ಮಾಡಿರುವ ಪ್ರಧಾನಿ ಮೋದಿ “ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು? 70 ವರ್ಷಗಳಿಂದ ದೇಶವನ್ನು ಲೂಟಿ ಹೊಡೆದ ಹಾಗೂ ಈಗಲೂ ಲೂಟಿ ಹೊಡೆಯುತ್ತಿರುವ ಲೆಜೆಂಡರಿ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ” ಎಂದು ಜನಪ್ರಿಯ ಸೀರಿಸ್‌ನ್ನು ಉಲ್ಲೇಖಿಸುವ ಮೂಲಕ ಪಿಎಂ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದುವರೆಗೆ ವಶಪಡಿಸಿಕೊಂಡ ಒಟ್ಟು ನಗದು ಹಣದಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಬಲಂಗಿರ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ 284 ಕೋಟಿ ರೂ., ಸಂಬಲ್‌ಪುರದಲ್ಲಿ 37.5 ಕೋಟಿ ರೂ. ಮತ್ತು ಛತ್ತೀಸ್‌ಗಢದಲ್ಲಿ 11 ಕೋಟಿ ರೂ. ಅಕ್ರಮ ಹಣ ದೊರೆತಿದೆ.
ದೇಶವಾಸಿಗಳು ಮೊದಲು ಈ (ಕರೆನ್ಸಿ) ನೋಟುಗಳ ಬಂಡಲ್‌ಗಳನ್ನು ನೋಡಬೇಕು ಮತ್ತು ನಂತರ ಅವರ ನಾಯಕರು ಮಾಡುವ ಪ್ರಾಮಾಣಿಕತೆಯ ಭಾಷಣಗಳನ್ನು ಕೇಳಬೇಕು. ಅವರು ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ, ಇದು ಮೋದಿಯವರ ಗ್ಯಾರಂಟಿ ಎಂದು ಪೋಸ್ಟ್ ಮಾಡಲಾಗಿದೆ.
ಒಡಿಶಾ, ಜಾರ್ಖಂಡ್ ಮತ್ತು ಬಂಗಾಳದಲ್ಲಿ ಹರಡಿರುವ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಬಲ್ದೇವ್ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಆವರಣದಲ್ಲಿ ನಗದು ತುಂಬಿದ ಅಲ್ಮಿರಾಗಳ ಛಾಯಾಚಿತ್ರಗಳನ್ನು ಹೊಂದಿರುವ ಪತ್ರಿಕೆಯ ವರದಿಯನ್ನು ಟ್ಯಾಗ್ ಮಾಡುವ ಮೂಲಕ ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳನ್ನು ಭ್ರಷ್ಟಾಚಾರದ ರೋಗವನ್ನು ಹರಡಿದ್ದಾರೆ, ಇದರ ವಿರುದ್ಧ ಕೇವಲ ಸರ್ಕಾರವಲ್ಲ, ದೇಶದ ಜನರು ಕೂಡ ಚಳವಳಿಯನ್ನು ಪ್ರಾರಂಭಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಹೇಳಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…