ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ.
ಮಧ್ಯ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ಪಕ್ಷ ಈ ವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಬಾರಿ ಬಿಜೆಪಿಯು ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿಎಂ ಹುದ್ದೆಯ ರೇಸ್ನಲ್ಲಿ ಚೌಹಾಣ್, ಸಿಂಧಿಯಾ ಸೇರಿ ಹಲವರ ಹೆಸರು ಕೇಳಿಬರುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಚುನಾವಣೆಯ ಹಿನ್ನೋಟ:
2018ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟು ಸರಳ ಬಹುಮತಕ್ಕೆ ಕೆಲವೇ ಸ್ಥಾನಗಳು ಕಾಂಗ್ರೆಸ್ಗೆ ಕಡಿಮೆಯಾಗಿದ್ದವು. ನಂತರ ಪಕ್ಷೇತರರು ಹಾಗೂ ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಆದರೆ, ಇದಾದ ಒಂದೂವರೆ ವರ್ಷದಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯವೆದ್ದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ನಂತರ ಬಿಜೆಪಿ ಸರ್ಕಾರ ರಚನೆಯಾಗಿ ಪುನಃ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಆಗಿದ್ದರು.
ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…