Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಾಡಾನೆ ದಾಳಿ; ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು

ಸಕಲೇಶಪುರ: ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿದ ಘಟನೆ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಆ.31ರ ಗುರುವಾರ ಬೆಳಗ್ಗೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗಾದೆ ವೆಂಕಟೇಶ್ ಮೃತಪಟ್ಟಿದ್ದಾರೆ.

ಕಾಡನ ದಾಳಿಗೆ ಅರಣ್ಯ ಇಲಾಖೆಯ ಸಿಬ್ಬಂದಿಯ ಮೃತಪಟ್ಟಿರುವುದು ಆತಂಕಕಾರಿ ಸಂಗತಿ ಆಗಿದೆ.

ಘಟನೆಯ ಹಿನ್ನೆಲೆ: ಸಕಲೇಶಪುರದ ಆಲೂರು ತಾಲೂಕಿನಲ್ಲಿ ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ಧು, ಈ ಹಿನ್ನೆಲೆಯಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿತ್ತು.

ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದು, ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ