BREAKING NEWS

ಹಿರಿಯ ನಾಗರಿಕರ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ
ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ನುಡಿದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲಾ ಸಂಪನ್ಮೂಲ ಆಗಬೇಕು ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago