Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜಿ20 ಶೃಂಗಸಭೆಯ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ: ಎಚ್‌.ಡಿ.ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ದೇವೇಗೌಡ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೆಹಲಿಯಲ್ಲಿ ಸೆ. 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ