BREAKING NEWS

ಗೆಲ್ಲುವ ತನಕ ವಿರಮಿಸುವುದಿಲ್ಲ : ಇಸ್ರೇಲ್ ಪ್ರಧಾನಿ

ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ.

ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಗೆಲುವಿನ ಕಡೆಯ ಕ್ಷಣದ ವರೆಗೂ ಹೋರಾಟ ನಡೆಸುತ್ತೇವೆ. ಬಾಂಬ್ ದಾಳಿಯಲ್ಲಿ ಯಾವುದೇ ವಿರಾಮವಿಲ್ಲ ಎಂದು ತಿಳಿಸಿದ್ದಾರೆ.

ಹಮಾಸ್ ವಿರುದ್ಧದ ಹೋರಾಟಕ್ಕೆ 14ನೇ ದಿನ ತುಂಬಿದೆ. ಗಾಜಾದ ಆರೋಗ್ಯ ಸಚಿವಾಲಯದಿಂದ ಮಾಹಿತಿಗಳ ಪ್ರಕಾರ ಈವರೆಗೂ 4,137 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ, 13,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಆಕ್ರಮಣದ ಸಮಯದಲ್ಲಿ ಹಮಾಸ್ 203 ಜನರನ್ನು ಒತ್ತೆಯಾಳಾಗಿರಿಸಿಕೊಂಡಿದೆ. ಅವರನ್ನು ಬಿಡುಗಡೆ ಮಾಡುವವರೆಗೂ ನಾವು ದಾಳಿ ಮುಂದುವರಿಸುತ್ತೇನೆ ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಈ‌ ನಡುವೆ ಇಸ್ರೇಲ್ ಗಾಜಾದಲ್ಲಿ ನಡೆಸುತ್ತಿರುವ ದಾಳಿಯ ತೀವ್ರತೆಯನ್ನು ಕಡಿಮೆ ಮಾಡಬೇಕು ಎಂದು ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಇಸ್ರೇಲ್‌ನಲ್ಲಿ ಬಂಡುಕೋರರು ದಾಳಿ ಮಾಡಿದ ನಂತರ ಗಾಜಾದಲ್ಲಿ ಒತ್ತೆಯಾಳುಗಳಾಗಿದ್ದ ಇಬ್ಬರು ಅಮೆರಿಕನ್ನರನ್ನ ಬಿಡುಗಡೆ ಮಾಡಿದ ಬಳಿಕ ಶ್ವೇತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹೆಚ್ಚಿನ ಒತ್ತೆಯಾಳುಗಳು ಹೊರಬರುವವರೆಗೆ ಇಸ್ರೇಲ್ -ಗಾಜಾದ ಸಂಭಾವ್ಯ ನೆಲದ ಆಕ್ರಮಣವನ್ನು ವಿಳಂಬಗೊಳಿಸಬೇಕು ಎಂದು ಹೇಳಿದ್ದಾರೆ.

ಅಮೆರಿಕ ಸಂಯುಕ್ತ ಸಂಸ್ಥಾನದೊಂದಿಗೆ ಯುರೋಪಿನ ಹಲವಾರು ಸರ್ಕಾರಗಳು ಗಾಜಾದ ಮೇಲೆ ನೆಲದ ಆಕ್ರಮಣವನ್ನು ವಿಳಂಬಗೊಳಿಸುವಂತೆ ಇಸ್ರೇಲ್ ಅನ್ನು ಒತ್ತಾಯಿಸುತ್ತಿವೆ. ಸೌದಿ ಅರೇಬಿಯಾ ಕಳೆದ ಎರಡು ವಾರಗಳಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಬಾಂಬ್ ದಾಳಿಯನ್ನು ಬಹಳ ಟೀಕಿಸಿದೆ.

lokesh

Recent Posts

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

32 mins ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

39 mins ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

1 hour ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

3 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

4 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

5 hours ago