Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಶಾಲಾ ಆವರಣದಲ್ಲಿ ವಾಮಾಚಾರ : ಬೆಚ್ಚಿಬಿದ್ದ ವಿದ್ಯಾರ್ಥಿಗಳು

ಚಿತ್ರದುರ್ಗ : ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ ತರಗತಿಗೆ ಬಂದ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ನೋಡಿ ಬೆಚ್ಚಿಬಿದ್ದಿದ್ದಾರೆ.

ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ ವಾಮಾಚಾರ ಕಂಡು ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಮಾತ್ರ ಆತಂಕ ಮನೆಮಾಡಿದೆ. ಹೀಗಾಗಿ ಈ ಕೃತ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ತಳಕು ಠಾಣೆಯ ಪಿಎಸ್‌ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಸದ್ಯ ಶಾಲಾ ಆವರಣದಲ್ಲಿ ಪತ್ತೆಯಾದ ತಲೆಬುರುಡೆ ಹಾಗೂ ಇತರ ವಸ್ತುಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ