ಚಿತ್ರದುರ್ಗ : ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ತರಗತಿಗೆ ಬಂದ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ನೋಡಿ ಬೆಚ್ಚಿಬಿದ್ದಿದ್ದಾರೆ.
ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ ವಾಮಾಚಾರ ಕಂಡು ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಮಾತ್ರ ಆತಂಕ ಮನೆಮಾಡಿದೆ. ಹೀಗಾಗಿ ಈ ಕೃತ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೃತ್ಯ ನಡೆದ ಸ್ಥಳಕ್ಕೆ ತಳಕು ಠಾಣೆಯ ಪಿಎಸ್‌ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಸದ್ಯ ಶಾಲಾ ಆವರಣದಲ್ಲಿ ಪತ್ತೆಯಾದ ತಲೆಬುರುಡೆ ಹಾಗೂ ಇತರ ವಸ್ತುಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…