ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ವೇತನವಿಲ್ಲ..; ಕಾರಣ ಕೇಳಿದ್ರೆ ಶಾಕ್‌ ಆಗೋದು ಗ್ಯಾರೆಂಟಿ!

ಹೊಸದಿಲ್ಲಿ: ದೇಶಾದ್ಯಂತ ಓಮಿಕ್ರಾನ್‌ ಕೊರೊನಾ ತಳಿ ಕಾಣಿಸಿಕೊಂಡ ಬೆನ್ನಲ್ಲೇ ಕೊರೊನಾ ಸೋಂಕಿತರ ಸಂಖ್ಯೆಯೂ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈ ಬಗೆಗಿನ ಕಳವಳ ಹಾಗೂ ಲಸಿಕೆ ಅಭಿಯಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ANI

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ವೇತನ ನೀಡುವುದಿಲ್ಲ ಎಂದು ಕಟ್ಟುನಿಟ್ಟಿನ ಶರತ್ತು ವಿಧಿಸಿದೆ. ಈ ಮೂಲಕ ಸರ್ಕಾರಿ ಸಿಬ್ಬಂದಿಗೆ ಕೋವಿಡ್ ಪ್ರಮಾಣಪತ್ರ ಕಡ್ಡಾಯಗೊಳಿಸಿದೆ. ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್‌ ಮೂಲಕ ತಿಳಿಸಿದೆ.

× Chat with us