BREAKING NEWS

ಸೈಬರ್‌ ವಂಚಕರಿಂದ ಹಣ ಕಳೆದುಕೊಂಡ ಮಹಿಳೆ : ನಿಷೇಧಿತ ತ್ರಿವಳಿ ತಲಾಖ್‌ ಹೇಳಿದ ಪತಿ

ಹೊಸದಿಲ್ಲಿ : ಭಾರತದಲ್ಲಿ 2017ರಲ್ಲಿಯೇ ತ್ರಿವಳಿ ತಲಾಖ್‌ ಪದ್ಧತಿಯನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿ ಆದೇಶ ಹೊರಡಿಸಿದೆ. ಆದರೂ ಓಡಿಶಾದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್‌ ಅನ್ನು ಹೇಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪತ್ನಿ ಸೈಬರ್‌ ವಂಚನೆಗೆ ಒಳಗಾದ ಬಳಿಕ ತ್ರಿವಳಿ ತಲಾಖ್‌ ಹೇಳಿದ 45 ವರ್ಷದ ವ್ಯಕ್ತಿಯನ್ನು ಶನಿವಾರ ಓಡಿಶಾ ಪೊಲೀಸರು ಬಂಧಿಸಿದ್ದಾರೆ.

ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 32 ವರ್ಷದ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ. ಸೈಬರ್‌ ವಂಚಕರಿಂದ 1.5 ಲಕ್ಷ ರೂ. ಕಳೆದುಕೊಂಡಿದ್ದನ್ನು ಪತ್ನಿ ಒಪ್ಪಿಕೊಂಡ ಬೆನ್ನಲ್ಲಿಯೇ ಪತಿ ತ್ರಿವಳಿ ತಲಾಖ್‌ ಹೇಳಿ ಅಕ್ರಮವಾಗಿ ವಿಚ್ಛೇದನ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕೇವಲ ತ್ರಿವಳಿ ತಲಾಖ್‌ ಮಾತ್ರವಲ್ಲದೇ ವರದಕ್ಷಿಣೆ ಸಂಬಂಧಿತ ಪತಿ ನನಗೆ ಚಿತ್ರಹಿಂಸೆ ಕೂಡ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನಂತೆ ಆರೋಪಿಯ ವಿರುದ್ಧ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ ಮತ್ತು ವರದಕ್ಷಿಣೆ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರಪಾರಾ ಸದರ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಸರೋಜ್‌ ಕುಮಾರ್‌ ಸಾಹೂ ತಿಳಿಸಿದ್ದಾರೆ.

15 ವರ್ಷಗಳ ಹಿಂದೆ ಈ ದಂಪತಿ ವಿವಾಹವಾಗಿದ್ದರು. ಇವರಿಗೆ ಮೂರು ಜನ ಮಕ್ಕಳಿದ್ದಾರೆ. ಈಗ ಸೈಬರ್‌ ವಂಚಕರಿಂದ 1.5 ಲಕ್ಷ ರೂ. ಕಳೆದುಕೊಂಡಿದ್ದಕ್ಕೆ ಪತಿ ಪತ್ನಿಗೆ ನಿಷೇಧಿತ ತ್ರಿವಳಿ ತಲಾಖ್‌ ಹೇಳುವ ಮೂಲಕ ಅಕ್ರಮವಾಗಿ ವಿಚ್ಛೇದನ ನೀಡಿದ್ದಾನೆ. ಸೈಬರ್‌ ವಂಚನೆಯಲ್ಲಿ ಮಹಿಳೆ ಯಾವ ರೀತಿ ಹಣ ಕಳೆದುಕೊಂಡಳು ಎನ್ನುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.

2017ರಲ್ಲಿ ತ್ರಿವಳಿ ತಲಾಖ್‌ ನಿಷೇಧ : 2017ರಲ್ಲಿ ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮದಲ್ಲಿ ಆಚರಣೆಯಲ್ಲಿದ್ದ ತ್ವರಿತ ವಿಚ್ಛೇದನ ಪದ್ಧತಿಯಾಗಿದ್ದ ತ್ರಿವಳಿ ತಲಾಖ್ ಅನ್ನು ನಿಷೇಧ ಮಾಡಿತ್ತು. ಇದು ಪವಿತ್ರ ಕುರಾನ್‌ನ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿ ವಿವಾದಾತ್ಮಕ ಪದ್ಧತಿಯನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ತ್ರಿವಳಿ ತಲಾಖ್‌ ಪದ್ಧತಿಯನ್ನು ಅನುಸರಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ನೀಡಬಹುದಾಗಿದೆ.

ಏನಿದು ತ್ರಿವಳಿ ತಲಾಖ್‌ : ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು. ಮುಸ್ಲಿಂ ಧರ್ಮದ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್‌ಗೆ ಬೇರೆಯೇ ವಿಧಿವಿಧಾನಗಳು ಇದ್ದವು. ಆದರೆ, ಅದು‌ ಆಧುನಿಕತೆಗೆ ತಕ್ಕಂತೆ ತ್ವರಿತ ವಿಚ್ಛೇದನ ಆಗಿಬಿಟ್ಟಿತ್ತು. ನಿಂತಲ್ಲೇ ಮೂರು ಬಾರಿ ತಲಾಖ್ ಹೇಳುವುದು, ಮೊಬೈಲ್ ಫೋನ್‌ನಲ್ಲಿಯೇ ಮೂರು ಬಾರಿ ತಲಾಖ್ ಹೇಳುವುದು; ವಾಟ್ಸ್‌ಆಪ್‌ ಅಥವಾ ಮೆಸೇಜ್ ಮೂಲಕ ಮೂರು ಬಾರಿ ತಲಾಖ್ ಹೇಳುವುದು; ಪತ್ರವೊಂದರಲ್ಲಿ ಮೂರು ಬಾರಿ ತಲಾಖ್ ಎಂದು ಬರೆಯುವುದು ಇತ್ಯಾದಿ ಅಕ್ರಮ ತಲಾಖ್ ಪದ್ಧತಿಗಳು ಚಾಲ್ತಿಯಲ್ಲಿದ್ದವು. ಆದ್ದರಿಂದ ಸುಪ್ರೀಂ ಕೋರ್ಟ್‌ 2017ರಲ್ಲಿ ಈ ಪದ್ಧತಿಯನ್ನು ನಿಷೇಧಗೊಳಿಸಿತು.

lokesh

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

5 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

5 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

6 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

7 hours ago