ತಿರುವನಂತಪುರ : ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು ಮಹಿಳಾ ಹಕ್ಕುಗಳ ಕಾರ್ಯಕರ್ತೆ ರೆಹಾನಾ ಫಾತಿಮಾ ವಿರುದ್ಧದ ಪೊಕ್ಸೊ ಪ್ರಕರಣವನ್ನು ವಜಾಗೊಳಿಸಿದೆ.
ಪುರುಷರು ತಮ್ಮ ದೇಹದ ಮೇಲ್ಭಾಗವನ್ನು ಪ್ರದರ್ಶಿಸುವುದು ನಗ್ನತೆಯಾಗಿ ಕಾಣುವುದಿಲ್ಲ. ಅದೇ ಮಹಿಳೆಯ ವಿಚಾರದಲ್ಲಿ ಇದು ವಿರುದ್ಧವಾಗಿರುತ್ತದೆ. ಪ್ರತಿಯೊಬ್ಬರೂ ತನ್ನ ದೇಹದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಂವಿಧಾನದಲ್ಲಿಯೇ ಅವಕಾಶ ಇರುವುದರಿಂದ ದ್ವಿಮುಖ ನೀತಿ ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೀಗಾಗಿ ಸಾಮಾಜಿಕ ಹೋರಾಟಗಾರ್ತಿ ವಿರುದ್ಧ ದಾಖಲಾಗಿದ್ದ ಮೊಕದ್ದಮೆಯನ್ನು ಕೇರಳ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣ ಏನು? ರೆಹಾನಾ 2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಶೀರ್ಷಿಕೆಯಲ್ಲಿ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಅವರು ಹೇಳಿದ್ದರು.
ಸೌಂದರ್ಯವು ನೋಡುಗನ ಕಣ್ಣಿನಲ್ಲಿರುವಂತೆಯೇ, ಅಶ್ಲೀಲತೆ ನೋಡುವವರ ದೃಷ್ಟಿಯಲ್ಲಿದೆ ಎಂದು ರೆಹನಾ ಬರೆದುಕೊಂಡಿದ್ದರು. ಕೇರಳ ಪೊಲೀಸರು ರೆಹಾನಾ ವಿರುದ್ಧ ಪೋಕ್ಸೊ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು. ಬಿಎಸ್ಎನ್ಎಲ್ ಮಾಜಿ ಉದ್ಯೋಗಿ ರೆಹಾನಾಗೆ ವಿವಾದ ಹೊಸದೇನಲ್ಲ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…