ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದ ಕಾರಣ ಇದು “ಅಪೂರ್ಣ” ಮಸೂದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ ಮತ್ತು ಜಾತಿ ಗಣತಿಗೆ ಒತ್ತಾಯಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ವಯನಾಡ್ ಸಂಸದ, ಮಹಿಳೆಯರಿಗೆ ಅಧಿಕಾರ ನೀಡುವ ವಿಚಾರದಲ್ಲಿ ಪ್ರಸ್ತುತ ಮಸೂದೆ ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.
‘ಮಹಿಳಾ ಮೀಸಲಾತಿ ಮಸೂದೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ’ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
“ಇದು (ಮಹಿಳಾ ಮೀಸಲಾತಿ ಮಸೂದೆ) ಒಂದು ದೊಡ್ಡ ಹೆಜ್ಜೆ ಮತ್ತು ಇದನ್ನು ಪ್ರತಿಪಕ್ಷಗಳು ಸೇರಿದಂತೆ ಎಲ್ಲರೂ ಬೆಂಬಲಿಸುತ್ತಾರೆ. ಇದು ನಮ್ಮ ದೇಶದ ಮಹಿಳೆಯರಿಗೆ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ಒಬಿಸಿ ಮೀಸಲಾತಿ ಇಲ್ಲದೆ ಮಸೂದೆ ಅಪೂರ್ಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು. ಈ ಮಸೂದೆಯನ್ನು ಜಾರಿಗೆ ತರಲು ನಿಮಗೆ ಹೊಸ ಜನಗಣತಿ, ಡಿಲಿಮಿಟೇಶನ್ ಅಗತ್ಯವಿದೆ ಎಂಬ ಕಲ್ಪನೆಯೇ ವಿಚಿತ್ರವಾಗಿದೆ. ಈ ಮಸೂದೆಯನ್ನು ಇಂದೇ ಜಾರಿಗೆ ತರಬಹುದು” ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಬೆಂಗಳೂರು: ಪರಿಸರವಾದಿಗಳ ವಿರೋಧದ ಬೆನ್ನಲ್ಲೇ ಲಾಲ್ಬಾಗ್ ಮೂಲಕ ಸುರಂಗ ರಸ್ತೆ ನಿರ್ಮಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಈ ಕುರಿತು…
ಕೆ.ಆರ್.ನಗರ: ಇಲ್ಲಿನ ಚುಂಚನಕಟ್ಟೆ ಸಮೀಪದ ಮಾಳನಾಯಕನಹಳ್ಳಿ ಬಳಿ ಚಾಮರಾಜ ಎಡದಂಡೆಯ ಕಿರು ನಾಲೆಯಲ್ಲಿ ಕಾಣಿಸಿಕೊಂಡ ಮೊಸಳೆಯನ್ನು ಸೆರೆಹಿಡಿಯಲಾಗಿದೆ. ಮೊಸಳೆಯನ್ನು ಗಮನಿಸಿದ…
ಸಂವಿಧಾನ ದಿನಾಚರಣೆ ಹೆಸರಲ್ಲಿ ಮೇಲಾಟಕ್ಕೆ ಪ್ರಗತಿಪರ ಚಿಂತಕರು, ಸಂಸ್ಕೃತಿ ಚಿಂತಕರು, ರೈತರು, ಕಾರ್ಮಿಕರ ಬೇಸರ ನವೆಂಬರ್ ೨೬ರಂದು ಮೈಸೂರಿನಲ್ಲಿ ಸಂವಿಧಾನ…
ನವದೆಹಲಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು…
ಬ್ರೇಕ್ ಬೀಳಬೇಕು ಅತಿಯಾಸೆಗೆ! ಇಲ್ಲಿಂದಲ್ಲಿಗೆ ಅಲ್ಲಿಂದಿಲ್ಲಿಗೆ ಇನ್ನೆಲ್ಲಿಗೆ ಹೋಗಬೇಕೆಂಬುದು ತಿಳಿಯದೆ ವಿಲವಿಲ ಒzಡಿತು ಕಾಡಾನೆ ಪಡೆ!ಹೊಸದೇನಲ್ಲ ಮಾನವ-ವನ್ಯಜೀವಿಗಳ ಸಂಘರ್ಷ! ಬೆಳೆದಂತೆಲ್ಲ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಮೊದಲ ಎರಡು ಸೀಟುಗಳಲ್ಲಿ ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಹಾಗೂ…