ಇಂದು ( ನವೆಂಬರ್ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಐಸಿಸಿ ಏಕದಿ್ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಸೆಮಿಫೈನಲ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ತಂಡಗಳನ್ನೇ ಈ ಪಂದ್ಯದಲ್ಲಿಯೂ ಇತ್ತಂಡಗಳು ಕಣಕ್ಕಿಳಿಸಿದ್ದು ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಭಾರತ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್