Mysore
28
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಿಶ್ವಕಪ್: ನರೇಂದ್ರ ಮೋದಿ ಸ್ಟೇಡಿಯಂಗೆ ಪೊಲೀಸ್ ಸರ್ಪಗಾವಲು

ಇಂದು ( ನವೆಂಬರ್ 19 ) ಅಹ್ಮದಾಬಾದಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು‌ನಿರೀಕ್ಷಿತ ಹೈವೋಲ್ಟೇಜ್ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯ ಜರುಗಲಿದೆ.
 
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಪ್ಯಾಟ್ ಕಮಿನ್ಸ್ ಮುನ್ನಡೆಸಲಿರುವ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವ ಚಾಂಪಿಯನ್ ಆಗುವ ಗುರಿಯನ್ನು ಹೊಂದಿದ್ದರೆ, ಟೀಮ್ ಇಂಡಿಯಾ ಮೂರನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯುವ ಯೋಜನೆಯಲ್ಲಿದೆ.
 
ಎರಡೂ ತಂಡಗಳೂ ಸಹ ಬಲಿಷ್ಟ ಆಟಗಾರರಿಂದ ಕೂಡಿದ್ದು ಯಾವ ತಂಡ ಗೆಲ್ಲಲಿದೆ ಎಂಬುದಕ್ಕೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನ 132000 ಕ್ರೀಡಾಭಿಮಾನಿಗಳು ಹಾಗೂ ಗಣ್ಯರು ಸಾಕ್ಷಯಾಗಲಿದ್ದಾರೆ. ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜಯ್ ಶಾ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು ಮತ್ತು ಸೆಲೆಬ್ರಿಟಿಗಳು ಸಹ ಆಗಮಿಸಲಿದ್ದು, ದೊಡ್ಡ ಮಟ್ಟದಲ್ಲಿಯೇ ಭದ್ರತೆಯನ್ನು ಆಯೋಜಿಸಲಾಗಿದೆ.
 
ಪಿಟಿಐ ಮಾಹಿತಿಯ ಪ್ರಕಾರ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಭದ್ರತೆಗೆಂದು 6000ಕ್ಕೂ ಹೆಚ್ವು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. 4 ಸೀನಿಯರ್ ಐಪಿಎಸ್ ಅಧಿಕಾರಿಗಳು, ಓರ್ವ ಐಜಿ ಹಾಗೂ ಓರ್ವ ಡಿಐಜಿ, 23 ಡಿಸಿಪಿಗಳು, 39 ಅಸಿಸ್ಟೆಂಟ್ ಪೊಲೀಸ್ ಕಮಿಷನರ್, ಎನ್ ಡಿ ಆರ್ ಎಫ್ ತಂಡಗಳು ಮತ್ತು 92 ಪೊಲೀಸ್ ಇನ್ಸ್ಪೆಕ್ಟರ್ ಗಳ ನೇಮಕವಾಗಿದೆ.

108:23
 
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!