ಇಂದು ( ನವೆಂಬರ್ 16 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲ್‌ಔಟ್ ಆಗಿ ಆಸ್ಟ್ರೇಲಿಯಾಗೆ ಗೆಲ್ಲಲು 213 ರನ್‌ಗಳ ಗುರಿಯನ್ನು ನೀಡಿದೆ.
ಈ ಬಾರಿಯ ಟೂರ್ನಿಯ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಚ್ಚರಿಪಡಿಸಿದ್ದ ಸೌತ್ ಆಫ್ರಿಕಾ ಈ ಪಂದ್ಯದಲ್ಲಿ ನಿರೀಕ್ಷಿಸಿದ ಪ್ರದರ್ಶನ ನೀಡುವಲ್ಲಿ ವಿಫಲಗೊಂಡಿದೆ. ತಂಡದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳು ವಿಫಲರಾದ ಕಾರಣ ತಂಡ ದೊಡ್ಡ ಮೊತ್ತ ಪೇರಿಸುವಲ್ಲಿ ಎಡವಿದೆ.
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ 3 ರನ್ ಗಳಿಸಿ ಔಟ್ ಆದರೆ, ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಸ್ಸಿ ವಾನ್‌ಡರ್ ಡಸನ್ 6 ರನ್ ಗಳಿಸಿದರು, ಏಡನ್ ಮಾರ್ಕ್ರಮ್ 10 ರನ್ ಗಳಿಸಿ ನಿರಾಸೆ ಮೂಡಿಸಿದರು. ಹೀಗೆ ಕೇವಲ 24 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿ ತಲುಪಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಐದನೇ ವಿಕೆಟ್‌ಗೆ ಜತೆಯಾದ ಹೈನ್‌ರಿಚ್ ಕ್ಲಾಸೀನ್ ಹಾಗೂ ಡೇವಿಡ್ ಮಿಲ್ಲರ್ ಆಸರೆಯಾದರು. ಕ್ಲಾಸೀನ್ 47 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ 101 ರನ್ ಗಳಿಸಿ ದಕ್ಷಿಣ ಆಫ್ರಿಕಾವನ್ನು ತೀವ್ರ ಮುಖಭಂಗದಿಂದ ಪಾರು ಮಾಡಿದರು. ಉಳಿದಂತೆ ಮಾರ್ಕೊ ಯಾನ್‌ಸೆನ್ ಶೂನ್ಯ, ಗೆರಾಲ್ಡ್ ಜೀಟ್ಜ್ 19. ಕೇಶವ್ ಮಹಾರಾಜ್ 4, ಕಗಿಸೊ ರಬಾಡಾ 10 ಮತ್ತು ತಬ್ರೈಜ್ ಸಂಶಿ ಔಟ್ ಆಗದೇ ಅಜೇಯ 1 ರನ್ ಕಲೆಹಾಕಿದರು.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ತಲಾ 3 ವಿಕೆಟ್ ಕಬಳಿಸಿದರೆ, ಜೋಶ್ ಹೇಜಲ್‌ವುಡ್ ಹಾಗೂ ಟ್ರೇವಿಸ್ ಹೆಡ್ ತಲಾ 2 ವಿಕೆಟ್ ಪಡೆದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…