ಇಂದು ( ನವೆಂಬರ್ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲ್ ಔಟ್ ಆಗಿದೆ.
ಈ ಗೆಲುವಿನೊಂದಿಗೆ ಭಾರತ ಫೈನಲ್ ತಲುಪಿದರೆ ಮೊಹಮ್ಮದ್ ಶಮಿ ಪಂದ್ಯದಲ್ಲಿ ಏಳು ವಿಕೆಟ್ ಪಡೆಯುವುದರ ಮೂಲಕ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅತ್ತ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ 711 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದು 591 ರನ್ ಗಳಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಎರಡನೇ ಸ್ಥಾನದಲ್ಲಿದ್ದಾರೆ ಹಾಗೂ 578 ರನ್ ಬಾರಿಸಿರುವ ನ್ಯೂಜಿಲೆಂಡ್‌ನ ರಚಿನ್ ರವೀಂದ್ರ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಪಂದ್ಯದಲ್ಲಿ ಏಳು ವಿಕೆಟ್ ಗಳಿಸುವ ಮೂಲಕ ಮೊಹಮ್ಮದ್ ಶಮಿ ಈ ಬಾರಿಯ ಟೂರ್ನಿಯಲ್ಲಿ ಒಟ್ಟು 23 ವಿಕೆಟ್ ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಡಂ ಜಂಪಾ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಆಡಂ ಜಂಪಾ 22 ವಿಕೆಟ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದು, 21 ವಿಕೆಟ್ ಪಡೆದಿರುವ ಶ್ರೀಲಂಕಾದ ದಿಲ್‌ಶಾನ್ ಮಧುಶಂಕ ಮೂರನೇ ಸ್ಥಾನದಲ್ಲಿದ್ದಾರೆ. ಇದರ ಜತೆಗೆ ಮೊಹಮ್ಮದ್ ಶಮಿ ವಿಶ್ವಕಪ್‌ನ ಪಂದ್ಯವೊಂದರಲ್ಲಿ 7 ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…