ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಇಂದು ( ನವೆಂಬರ್ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ಆವೃತ್ತಿಯಲ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ ಹಿಂದಿನ ಸಚಿನ್ ದಾಖಲೆಯನ್ನು ಮುರಿದುಹಾಕಿದ್ದಾರೆ.
ಸಚಿನ್ ತೆಂಡೂಲ್ಕರ್ ತಮ್ಮ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಶತಕ ಬಾರಿಸಿದ್ದ ದಾಖಲೆ ಹೊಂದಿದ್ದರು. ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ 50ನೇ ಏಕದಿನ ಶತಕ ಬಾರಿಸುವ ಮೂಲಕ ಈ ಬೃಹತ್ ದಾಖಲೆಯನ್ನು ಅಳಿಸಿಹಾಕಿದ್ದಾರೆ.
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…