BREAKING NEWS

ವಿಶ್ವಕಪ್‌ ಸೆಮಿಫೈನಲ್:‌ ಶತಕಗಳ ಅರ್ಧಶತಕ ಸಿಡಿಸಿದ ಕಿಂಗ್‌ ಕೊಹ್ಲಿ

ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಶತಕ ಬಾರಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್‌ ಆವೃತ್ತಿಯಲ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ ಹಿಂದಿನ ಸಚಿನ್‌ ದಾಖಲೆಯನ್ನು ಮುರಿದುಹಾಕಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ತಮ್ಮ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಶತಕ ಬಾರಿಸಿದ್ದ ದಾಖಲೆ ಹೊಂದಿದ್ದರು. ವಿರಾಟ್‌ ಕೊಹ್ಲಿ ಇಂದಿನ ಪಂದ್ಯದಲ್ಲಿ 50ನೇ ಏಕದಿನ ಶತಕ ಬಾರಿಸುವ ಮೂಲಕ ಈ ಬೃಹತ್‌ ದಾಖಲೆಯನ್ನು ಅಳಿಸಿಹಾಕಿದ್ದಾರೆ.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

36 mins ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

1 hour ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago