BREAKING NEWS

ಯಮುನಾ ನದಿ ಪ್ರವಾಹ: ತಗ್ಗು ಪ್ರದೇಶದ ಜನರ ಸ್ಥಳಾಂತರಕ್ಕೆ ಆದೇಶಿಸಿದ ಕೇಜ್ರಿವಾಲ್

ದೆಹಲಿ: ದೆಹಲಿಯಲ್ಲಿ ಯಮುನಾ ನದಿ ಬುಧವಾರದಂದು ದಾಖಲೆಯ ಮಟ್ಟದಿಂದ ಉಕ್ಕಿ ಹರಿಯುತ್ತಿದ್ದು, 45 ವರ್ಷಗಳ ಹಿಂದಿನ ದಾಖಲೆಯನ್ನು ಇದು ಮೀರಿದೆ. ಅದೇ ವೇಳೆ ಯಮುನಾ ನದಿಯ ಸಮೀಪದಲ್ಲಿರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ.

ನಾವು ಜೀವಗಳು, ಆಸ್ತಿಗಳನ್ನು ರಕ್ಷಿಸಬೇಕಾಗಿದೆ. ಯಮುನಾ ನದಿಯ ಸಮೀಪವಿರುವ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಅಗತ್ಯವಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಗೆ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

ಯಮುನಾದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದಾಗಿ ಅಗತ್ಯವಿದ್ದರೆ ಶಾಲೆಗಳನ್ನು ಪರಿಹಾರ ಶಿಬಿರಗಳನ್ನಾಗಿ ಪರಿವರ್ತಿಸಲು ಜಿಲ್ಲಾಧಿಕಾರಿಗಳಿಗೆ ಕೇಜ್ರಿವಾಲ್ ಸೂಚನೆ ನೀಡಿದರು.

ದೆಹಲಿಯ ಯಮುನಾ  ನದಿ ನೀರಿನ ಮಟ್ಟ  ಬುಧವಾರ 207.71 ಮೀಟರ್‌ಗೆ ಏರಿದ್ದು, 1978 ರಲ್ಲಿ ನೀರಿನ ಮಟ್ಟ 207.49 ಮೀಟರ್‌ಗಳಷ್ಟು ಏರಿಕೆ ಆಗಿತ್ತು. ನೀರಿನ ಮಟ್ಟ ಏರಿಕೆ ಆಗುತ್ತಿದ್ದಂತೆ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ. ಮಳೆಯಿಂದಾಗಿ ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ದೆಹಲಿ ಪೊಲೀಸರು ನಗರದ ದುರ್ಬಲ ಭಾಗಗಳಲ್ಲಿ ಜನರು ಒಟ್ಟುಸೇರುವುದನ್ನು ನಿಷೇಧಿಸಿದ್ದಾರೆ.

ನದಿಯ ಸಮೀಪವಿರುವ ಮನೆಗಳು ಮತ್ತು ಮಾರುಕಟ್ಟೆಗಳಿಗೆ ನೀರು ನುಗ್ಗಿದ್ದರಿಂದ ಈಗಾಗಲೇ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕೇಂದ್ರ ಜಲ ಆಯೋಗದ ಮುನ್ಸೂಚನೆಗಳು ನೀರಿನ ಮಟ್ಟವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಪ್ರವಾಹದ ಭೀತಿ ಉಂಟು ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಯಮುನಾದಲ್ಲಿ ನೀರಿನ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡಲು ಹರ್ಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ಸೀಮಿತ ನೀರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ದೇಶದ ರಾಜಧಾನಿಯಲ್ಲಿ ಪ್ರವಾಹದ ಸುದ್ದಿ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುವುದಿಲ್ಲ. ನಾವು ಒಟ್ಟಾಗಿ ದೆಹಲಿಯ ಜನರನ್ನು ಈ ಪರಿಸ್ಥಿತಿಯಿಂದ ರಕ್ಷಿಸಬೇಕಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಮುಂಬರುವ ವಾರಗಳಲ್ಲಿ ದೆಹಲಿಯು ಜಿ -20 ಶೃಂಗಸಭೆಯನ್ನು ಆಯೋಜಿಸಲು ತಯಾರಿ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ನಿರಾಶ್ರಿತ ನಿವಾಸಿಗಳು ತೊಂದರೆಗೊಳಗಾಗಿದ್ದು ಸರ್ಕಾರವು ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅವರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ನದಿ ದಂಡೆಗಳನ್ನು ಬಲಪಡಿಸಲು ಮತ್ತು ಪ್ರವಾಹ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ದೆಹಲಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕಂದಾಯ ಸಚಿವ ಅತಿಶಿ ಹೇಳಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿವಾಸಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಮತ್ತು ತಗ್ಗು ಪ್ರದೇಶಗಳನ್ನು ತಪ್ಪಿಸಲು ಸಲಹೆಗಳನ್ನು ನೀಡಿದೆ.

ಪ್ರವಾಹವು ದೆಹಲಿಗೆ ಹೊಸದಲ್ಲ, 1924, 1977, 1978, 1995, 2010, ಮತ್ತು 2013 ರಲ್ಲಿ ಪ್ರಮುಖ ಪ್ರವಾಹಗಳು ನಗರವನ್ನು ಮುಳುಗಿಸಿವೆ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

39 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

50 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

57 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago