BREAKING NEWS

Yash 19: ಬಹುದಿನಗಳ ಕಾಯುವಿಕೆಗೆ ಬಿತ್ತು ತೆರೆ, ಯಶ್‌ 19 ಟೈಟಲ್‌ ಘೋಷಣೆ; ಮಹಿಳಾ ಡೈರೆಕ್ಟರ್‌ ಜತೆ ಯಶ್‌ ಸಿನಿಮಾ

ಯಶ್‌ 19 ಸತತವಾಗಿ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದ್ದ ಟಾಪಿಕ್.‌ ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಇದೀಗ ಇಂದು ( ಡಿಸೆಂಬರ್‌ 8 ) ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬುದು ಹೊರಬಿದ್ದಿದೆ.

ಯಶ್‌ ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರವನ್ನು ಮಾಡುತ್ತಿದ್ದಾರೆ. ಲಯರ್ಸ್‌ ಡೈಸ್‌ ಎಂಬ ಹಿಂದಿ ಚಿತ್ರ ಹಾಗೂ ಮುತ್ತೂನ್‌ ಎಂಬ ಮಲಯಾಳಂ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಗೀತು ಮೋಹನ್‌ದಾಸ್‌ ಇದೀಗ ತಮ್ಮ ಮೂರನೇ ಚಿತ್ರವನ್ನು ಯಶ್‌ಗೆ ನಿರ್ದೇಶಿಸಲಿದ್ದಾರೆ. ಚಿತ್ರಕ್ಕೆ ʼಟಾಕ್ಸಿಕ್‌ʼ ಎಂದು ಹೆಸರಿಡಲಾಗಿದೆ.

ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ. 

andolana

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

2 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

4 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

4 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

4 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

6 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

7 hours ago