ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ “ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ನಿರ್ಧಾರ ಕೈಗೊಂಡಿದೆ. ಬಿಜೆಪಿ ಪಕ್ಷದ ಅಧ್ಯಕ್ಷ, ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅವರ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸಿದ್ದೀರಾ? ಇಲ್ಲ, ಹೀಗಿರುವಾಗ ಪ್ರತಿಭಟನೆಗೆ ಕರೆ ನೀಡುವುದಕ್ಕೆ ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ 2013-18ನೇ ಸಾಲಿನವರೆಗೆ ಅಧಿಕಾರದಲ್ಲಿದ್ದಾಗ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಈ ಬಾರಿಯೂ ನೀಡಿರುವ ಎಲ್ಲಾ ಚುನಾವಣಾ ಭರವಸೆಗಳನ್ನು ಕಾರ್ಯಗತಗೊಳಿಸಲು ಈಗಾಗಲೇ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಯಡಿಯೂರಪ್ಪ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಭಾನುವಾರ ಘೋಷಿಸಿದ ಯಡಿಯೂರಪ್ಪ, ಜುಲೈ 4 ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಭಾನುವಾರ ಹೇಳಿದರು.
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…