ಕೋವಿಡ್‌ನಿಂದ ಮೃತಪಟ್ಟವರ ಬಿಪಿಎಲ್‌ ಕುಟುಂಬಕ್ಕೆ 1 ಲಕ್ಷ ಪರಿಹಾರ: ಸಿಎಂ ಬಿಎಸ್‌ವೈ ಘೋಷಣೆ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಕುಟುಂಬದಲ್ಲಿ ಮೃತಪಟ್ಟವರಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಇದಕ್ಕಾಗಿ 250ರಿಂದ 300 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು.

× Chat with us