Mysore
21
haze

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ನಾಪತ್ತೆಯಾಗಿದ್ದ ಯೋಗೇಶ್ವರ್‌ ಭಾವ ಶವವಾಗಿ ಪತ್ತೆ

ಚಾಮರಾಜನಗರ : ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಹನೂರಿನ ಬಳಿಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ತಲೆಯಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿದೆ.

ಕಳೆದ ಶುಕ್ರವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶುಕ್ರವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

ಈ ನಡುವೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿತ್ತು. ಈ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು, ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ಕೂಡ ರಚನೆ ಮಾಡಲಾಗಿತ್ತು.

ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಹದೇವಯ್ಯ ಅವರ ತಲೆಗೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂಬಂತೆ ಕಾಣುತ್ತಿದೆ. ಆದರೆ ಯಾರು ಕೊಲೆ ಮಾಡಿದ್ದಾರೆ ಯಾತಕ್ಕಾಗಿ ಈ ರೀತಿಯಾಗಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!