BREAKING NEWS

ಹೈಕಮಾಂಡ್ ಸಚಿವ ಸ್ಥಾನ ಬಿಟ್ಕೊಡಿ ಅಂದ್ರೆ ಬಿಟ್ಟು ಕೊಡ್ತೀನಿ : ಪರಮೇಶ್ವರ್

ಬೆಂಗಳೂರು : ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು ಅನ್ನುತ್ತೋ ಅವರಿಗೆ ಬಿಟ್ಟು ಕೊಡುತ್ತೇನೆ. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ ನಾಯಕರೂ ನಮ್ಮ ಬಗ್ಗೆ ಮಾತ್ರ ಮಾತಾಡ್ತಾರೆ. ಅವರ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಅವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಇದೆ. ಅವರೆಲ್ಲ ನಮ್ಮ ಪಕ್ಷಕ್ಕೆ ಬರ್ತಾರೇನೋ?. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸ್ತಿದ್ದಾರೇನೋ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‍ನಲ್ಲಿ ಇನ್ನೆರಡು ಡಿಸಿಎಂ ಸ್ಥಾನಗಳ ಸೃಷ್ಟಿಗೆ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ಡಿಸಿಎಂ ಚರ್ಚೆ ಹಳೇದಾಯ್ತು ಅನ್ಕೊಂಡಿದ್ದೆ. ಯಾರಿಗೆ ಯಾವ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಯಾವ ಸಂದರ್ಭಸಲ್ಲಿ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ತೀರ್ಮಾನ ತಗೊಳ್ಳುತ್ತೆ ಎಂದು ತಿಳಿಸಿದರು.

ಇದೇ ವೇಳೆ ಮಂತ್ರಿ ಸ್ಥಾನಕ್ಕೆ ಹಲವು ಶಾಸಕರ ಆಗ್ರಹ ವಿಚಾರದ ಕುರಿತು ಮಾತನಾಡಿ, ಎಲ್ಲರೂ ಮಂತ್ರಿ ಆಗೋದು ಒಳ್ಳೆಯದೇ. ಹೈಕಮಾಂಡ್ ನವ್ರೇ ಇದರ ಬಗ್ಗೆ ನಿರ್ಧಾರ ಮಾಡುತ್ತೆ. ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಕೊಡಿ ಅಂದ್ರೂ ಬಿಟ್ಕೊಡ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಅಂದ್ರು.

ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲು ಹೋರಾಟ, ಗಡಿಯಲ್ಲಿ ಆತಂಕ ವಿಚಾರದ ಸಂಬಂಧ, ಮಹಾರಾಷ್ಟ್ರ ಗಡಿಯಲ್ಲಿ ಭದ್ರತೆ ಹೆಚ್ಚಳ ಮಾಡಿದ್ದೇವೆ. ಎಲ್ಲೆಲ್ಲಿ ಸೂಕ್ಷ್ಮ ವಾತಾವರಣ ಇದೆಯೋ ಅಲ್ಲಿ ಕೆಎಸ್‍ಆರ್‍ ಪಿ ತುಕಡಿ ನಿಯೋಜನೆ ಮಾಡಿದ್ದೇವೆ. ಭದ್ರತಾ ವ್ಯವಸ್ಥೆ ಹೆಚ್ಚಳ ಮಾಡಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ಕೂಡ ಕರಾಳ ದಿನ ಅಂತ ಮಾಡುತ್ತಿದೆ. ಹಾಗೇನಾದ್ರೂ ಮಾಡಿದ್ರೆ ಅದನ್ನು ತಡೆಯುವ ಕೆಲಸ ಮಾಡ್ತೇವೆ ಎಂದು ಹೇಳಿದರು.

ಶಾಸಕರ ಹೇಳಿಕೆಗಳ ಬಗ್ಗೆ ಅಧ್ಯಕ್ಷರು ನೋಡಿಕೊಳ್ತಾರೆ. ಅಧ್ಯಕ್ಷರೇ ಅದನ್ನೆಲ್ಲ ನಿಯಂತ್ರಣ ಮಾಡ್ತಾರೆ. ಈಗಾಗಲೇ ಬಹಿರಂಗ ಹೇಳಿಕೆ ಕೊಡಬೇಡಿ ಅಂತ ಅಧ್ಯಕ್ಷರು ಸೂಚಿಸಿದ್ದಾರೆ. ರಮೇಶ್ ಜಾರಕಿಹೊಳಿ ಹೇಳಿಕೆಗಳಿಗೆ ಉತ್ತರ ಕೊಡಕ್ಕಾಗಲ್ಲ. ಪ್ರತಿಯೊಬ್ಬರಿಗೂ ಉತ್ತರ ಕೊಡ್ತಿದ್ರೆ ಕೊನೇ ಇರಲ್ಲ ಎಂದರು.

ಯಾರೆಲ್ಲ ದುಬೈ ಹೋಗ್ತಾರೆ ಅಂತ ಗೊತ್ತಿಲ್ಲ, ನೋಡೋಣ. ಯಾಕೆ ಹೋಗ್ತಿದ್ದಾರೆ ಗೊತ್ತಿಲ್ಲ, ಸುತ್ತಾಡೋಕ್ಕೆ ಹೋಗ್ತಿದ್ದಾರೋ ಏನೋ. ಅಲ್ಲಿ ನಮ್ಮ ಕನ್ನಡ ಸಂಘಗಳಿವೆ, ಅವರೇನಾದರೂ ಕರೆದಿದ್ದಾರಾ ಇಲ್ವಾ ಅಂತ ನೋಡಬೇಕು ಎಂದು ಸತೀಶ್ ಜಾರಕಿಹೊಳಿ ಬಣದಿಂದ ದುಬೈ ಪ್ರವಾಸದ ಕುರಿತು ಪರಂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

lokesh

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago