ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. …









