ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಸಂಗತಿ. ಬಡವರನ್ನು ಆರ್ಥಿಕವಾಗಿ ಉತ್ತೇಜಿಸಲು ರೂಪಿಸಲಾದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೇ ವಿನಾ ಅನರ್ಹರು ದುರುಪಯೋಗಪಡಿಸಿಕೊಳ್ಳುವುದು ಸರ್ವಥಾ ಸಲ್ಲದು. …







