ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ತರಕಾರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿವೆ. …










