Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್‌ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಸೋತಿದ್ದೇವೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್‌ ನಾಯಕರು …

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು; ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ …

ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಷಿನ್‌ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್‌ ಬಳಿ ಈ ಘಟನೆ ನಡೆದಿದೆ. ಮೃತರು ವಿಜಯಪುರದ ಜಿಲ್ಲೆಯ ಅಲಿಯಾಬಾದ್‌ ನಿವಾಸಿಗಳು …

ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ …

ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್‌ ಗ್ಯಾಂಗ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್‌.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ …

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್‌ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್‌ ಪೆಡ್ಲರ್‌ಗಳು …

ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು(ಡಿ.6) ಆಯೋಜಿಸಲಾಗಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ …

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ …

ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು …

Stay Connected​
error: Content is protected !!