ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು ವಿವಿಧೆಡೆ ಸ್ಥಳ ಮಹಜರು ಮಾಡಲಾಗುತ್ತಿದೆ. …










