4 ಲಕ್ಷ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಶೀಘ್ರವೇ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕೇಂದ್ರ ಸರ್ಕಾರದಿಂದ 4 ಲಕ್ಷ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

× Chat with us