ಜಿಟಿಜಿಟಿ ಮಳೆಯ ನಡುವೆ ಮಾದಪ್ಪನ ದರ್ಶನ ಪಡೆದ ಸಿಎಂ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಮುಂಜಾನೆಯಿಂದ ಸುರಿಯುತ್ತಿರುವ ಜಿಟಿ‌ಜಿಟಿ ಮಳೆಯ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೇವರ ದರ್ಶನ ಪಡೆದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭಕ್ಕೆ ಪಾಲ್ಗೊಳ್ಳುವ ಮುನ್ನ ದೇವಾಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಚಿವರಾದ ಸುರೇಶ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಭಕ್ತರ ಪರದಾಟ: ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭಕ್ತರು ಪರದಾಡಿದ ಘಟನೆ ನಡೆಯಿತು. ಸಿಎಂ ಕಾರ್ಯಕ್ರಮ ನಡೆಯುವ ರಂಗಮಂದಿರಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲದಿದ್ದರಿಂದ ವರುಣನಿಂದ ತಪ್ಪಿಸಿಕೊಳ್ಳಲು ಪರದಾಡಿದರು.

× Chat with us