ಅಂಕಣಗಳು

ರಾಗಿಯ ಜೊತೆಗಿನ ಅನುರಾಗ

ಅಹಲ್ಯ ಅಪ್ಪಚ್ಚು, ಚಿತ್ರಕಲಾವಿದೆ, ಸೋಮವಾರಪೇಟೆ

ರಾಗಿ ತಿಂದವನಿಗೆ ರೋಗವಿಲ್ಲ ಎಂಬ ಗಾದೆ ಮಾತಿದೆ. ಅದರಂತೆ ನಾವು ಪ್ರತಿದಿನ ರಾಗಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ನಾನು ನನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಗಿ ಸೇವನೆ ಮಾಡುತ್ತೇನೆ. ಪ್ರತಿ ದಿನ ಮುಂಜಾನೆಯ ತಿಂಡಿಯ ಬದಲಿಗೆ ಅಥವಾ ರಾಗಿಯ ಜೊತೆಗಿನ ಅನುರಾಗ ಲಘು ಉಪಾಹಾರದೊಂದಿಗೆ ರಾಗಿ ಮಾಲ್ಟ್ ಕುಡಿಯುತ್ತೇನೆ. ಇದರಿಂದ ದೇಹ ತಂಪಾಗಿರುವ ಜತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ರಾಗಿ ಮಾಲ್ಟ್ ಅನ್ನು ಮನೆಯಲ್ಲಿ ನಾನೇ ತಯಾರಿಸಿಕೊಳ್ಳುತ್ತೇನೆ.

ರಾಗಿ ಜತೆಗೆ ಅಗತ್ಯಕ್ಕೆ ತಕ್ಕಂತೆ ಬಾದಾಮಿ, ಗೊಡಂಬಿ, ಜೋಳ, ಗೋಧಿ, ಅಕ್ಕಿ ಜತೆಗೆ ಒಂದಿಷ್ಟು ಮಾದರಿಯ ಕಾಳುಗಳನ್ನು ಸೇರಿಸಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು. ನಂತರ ಅದನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಬೆಳಗಿನ ಸಮಯದಲ್ಲಿ ಸೇವಿಸಬೇಕು. ಇದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಸಿಗುವ ಜತೆಗೆ ಹಿತಮಿತವಾದ ಆಹಾರ ಸೇವಿಸಿದಂತಾಗುತ್ತದೆ. ಇದರೊಂದಿಗೆ ಹೊರ ಭಾಗದ ಆಹಾರಗಳ ಸೇವನೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಇಂತಹ ಆಹಾರಗಳ ಸೇವನೆ ಕಡೆ ಗಮನ ನೀಡಿದರೆ, ದೇಹದ ಆರೋಗ್ಯವು ಚೆನ್ನಾಗಿರುತ್ತದೆ. ಜತೆಗೆ ಫ್ಯಾಟ್ ಕೂಡ ಕಡಿಮೆಯಾಗಲಿದೆ.

andolanait

Recent Posts

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

18 mins ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

3 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

3 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

3 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

3 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

4 hours ago