ರಾಜಕೀಯ ಮೇಲಾಟದ ಕೇಂದ್ರವಾದ BASE : ಭಾಗ-2

ನಾ ದಿವಾಕರ

ಬೇಸ್ ವಿಶ್ವವಿದ್ಯಾಲಯದ ಧ್ಯೇಯ ಮತ್ತು ಗುರಿ: ಡಾ.ಬಿ.ಆರ್‌ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವು ಅರ್ಥಶಾಸ್ತ್ರ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಒಂದು ಅತ್ಯುತ್ಕೃಷ್ಟ ಕಲಿಕೆಯ ಶೈಕ್ಷಣಿಕ ಸಂಸ್ಥೆಯಾಗಿ ರೂಪುಗೊಂಡಿದೆ. ಶೀಘ್ರಗತಿಯಲ್ಲಿ ಬದಲಾಗುತ್ತಿರುವ ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಯ ಪಥದಲ್ಲಿರುವ ಭಾರತದ ವರ್ತಮಾನದ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಅರ್ಥಶಾಸ್ತ್ರೀಯ ಜ್ಞಾನ ಪ್ರಸರಣದ ಒಂದು ಉತ್ಕೃಷ್ಟ ಸಂಸ್ಥೆಯಾಗಿ ಇದನ್ನು ರೂಪಿಸಲಾಗಿದೆ. ಭವಿಷ್ಯದ ಪೀಳಿಗೆಯ ಅರ್ಥಶಾಸ್ತ್ರಜ್ಞರನ್ನು ರೂಪಿಸುವುದಷ್ಟೇ ಅಲ್ಲದೆ, ನೀತಿ ನಿರೂಪಕರನ್ನೂ ಸಿದ್ಧಪಡಿಸುವ ನಿಟ್ಟಿನಲ್ಲಿ ದೇಶವು ಎದುರಿಸುತ್ತಿರುವ ಹಲವಾರು ಮಾರುಕಟ್ಟೆ ಸವಾಲುಗಳಿಗೆ ಸ್ಪಂದಿಸಲು ಸೂಕ್ತ ವಿದ್ಯಾರ್ಜನೆಯ ಮಾರ್ಗಗಳನ್ನು ಈ ವಿಶ್ವವಿದ್ಯಾಲಯದಲ್ಲಿ ಕಲ್ಪಿಸಲಾಗುತ್ತದೆ.

ಅರ್ಥಶಾಸ್ತ್ರ ಮತ್ತು ತತ್ಸಂಬಂಧಿ ಜ್ಞಾನಶಿಸ್ತುಗಳಲ್ಲಿ ಒಂದು ವಿಶಿಷ್ಟ ಕಲಿಕಾ ಮಾದರಿಯನ್ನು ಅಳವಡಿಸಲಾಗುತ್ತಿದ್ದು, ಸಂಶೋಧನೆಗೆ ಪೂರಕವಾದಂತಹ ಕಲಿಕಾ ಮಾರ್ಗಗಳನ್ನು ರೂಪಿಸಲಾಗುತ್ತದೆ. ಈ ವಿಶ್ವವಿದ್ಯಾಲಯದ ಪಠ್ಯಕ್ರಮವನ್ನೂ ಅತ್ಯುತ್ಕೃಷ್ಟ ಮಟ್ಟದಲ್ಲಿ ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಾಲಘಟ್ಟದ ಕಾರ್ಪೋರೇಟ್, ಶೈಕ್ಷಣಿಕ, ವಿಶ್ಲೇಷಣಾತ್ಮಕ ಹಾಗೂ ಸಾರ್ವಜನಿಕ ಆಡಳಿತ ನೀತಿಗಳ ಚೌಕಟ್ಟಿನಲ್ಲಿ ತಯಾರು ಮಾಡಲಾಗುತ್ತದೆ. ಅತ್ಯಾಧುನಿಕ ತಾತ್ವಿಕ ಮತ್ತು ಪ್ರಾಯೋಗಿಕ ವಿಮರ್ಶೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಈ ವಿಶ್ವವಿದ್ಯಾಲಯದಿಂದ ಹೊರಬೀಳುವ ವಿದ್ಯಾರ್ಥಿಗಳು ತಮ್ಮ ಮುಂದಿನ ಅವಕಾಶಗಳನ್ನು ಸಮರ್ಪಕವಾಗಿ, ಸಮರ್ಥನೀಯವಾಗಿ ಬಳಸಿಕೊಳ್ಳುವಂತೆ ತರಬೇತಿ ನೀಡಲಾಗುತ್ತದೆ.

ಐದು ವರ್ಷಗಳ ಇಂಟಿಗ್ರೇಟೆಡ್ ಎಂಎಸ್ಸಿ ಎಕನಾಮಿಕ್ಸ್ ಈ ವಿಶ್ವವಿದ್ಯಾಲಯದ ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿ ರೂಪುಗೊಂಡಿದೆ.

ಅರ್ಥಶಾಸ್ತ್ರವನ್ನು ಇತರ ಸಂಬಂಧಿತ ವಿಚಾರಗಳೊಡನೆ ಆಳವಾಗಿ ಅಭ್ಯಸಿಸಿ ಅಧ್ಯಯನ ನಡೆಸುವಂತಹ ಪಠ್ಯಕ್ರಮಗಳನ್ನು ಈ ಕೋರ್ಸ್‌ನಲ್ಲಿ ಅಳವಡಿಸಲಾಗಿದೆ. ಈ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಮೂರು ವರ್ಷದ ಅಧ್ಯಯನದ ನಂತರ ಅರ್ಥಶಾಸ್ತ್ರದ ಬಿಎಸ್ಸಿ (ಆನರ್ಸ್ )ಪದವಿಯೊಂದಿಗೆ ನಿರ್ಗಮಿಸುವ ಆಯ್ಕೆಯನ್ನೂ ಕಲ್ಪಿಸಲಾಗಿದೆ. ಎಂಎಸ್ಸಿ ಎಕನಾಮಿಕ್ಸ್ ೨ ವರ್ಷದ ಪದವಿ ಕೋರ್ಸ್ ಮೂಲಕವೂ ವಿದ್ಯಾರ್ಥಿಗಳು ಅರ್ಥಶಾಸ್ತ್ರದ ವಿಭಿನ್ನ ವಿಷಯಗಳನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನೂ ಸುಲಭವಾಗಿ ಕಲ್ಪಿಸಲು ನೆರವಾಗುತ್ತದೆ. ಕಾರ್ಪೋರೇಟ್ ವಲಯಕ್ಕೆ ಅವಶ್ಯವಾದ ಮತ್ತು ಸಾರ್ವಜನಿಕ ನೀತಿಗಳು ಮತ್ತು ಸಂಶೋಧನೆಗೆ ಪೂರಕವಾದ ಪಠ್ಯವಿಷಯಗಳನ್ನು ಅಧ್ಯಯನ ಮಾಡಲು ಈ ಕೋರ್ಸ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಇವೆರಡರ ಹೊರತಾಗಿ ಆಸಕ್ತ ವಿದ್ಯಾರ್ಥಿಗಳಿಗಾಗಿ ಪೂರ್ಣ ಪ್ರಮಾಣದ ಪಿಹೆಚ್‌ಡಿ ಪಡೆಯುವ ಸೌಲಭ್ಯವನ್ನೂ ಒದಗಿಸಲಾಗಿದೆ. ಬೌದ್ಧಿಕವಾಗಿ ಆಸಕ್ತಿ ಇರುವವರು ಮತ್ತು ಉತ್ತಮ ಶೈಕ್ಷಣಿಕ ಹಿನ್ನೆಲೆ ಇರುವ ವಿದ್ಯಾರ್ಥಿಗಳು ಪಿಹೆಚ್‌ಡಿ ಮಾಡಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಅರ್ಥಶಾಸ್ತ್ರ ಮತ್ತು ಅಭಿವೃದ್ಧಿ ಅಧ್ಯಯನಗಳಲ್ಲಿ ಹೆಚ್ಚಿನ ಜ್ಞಾನ ಪಡೆಯುವ ಸಲುವಾಗಿ ಪಿಹೆಚ್ಡಿ ಯೋಜನೆಯನ್ನು ಅಳವಡಿಸಲಾಗಿದೆ. ಈ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಅಂತರ್ ಶಿಸ್ತೀಯ ಅಧ್ಯಯನದ ಅವಕಾಶಗಳನ್ನೂ ಸಹ ಕಲ್ಪಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಎಲ್ಲ ಕೋರ್ಸ್‌ಗಳಲ್ಲೂ ಎರಡು ಬ್ಯಾಚ್‌ನಲ್ಲಿ ನೂರಾರು ವಿದ್ಯಾರ್ಥಿಗಳು ತಮ್ಮ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಪಡೆದು ನಿರ್ಗಮಿಸಿದ್ದಾರೆ.

ಮರು ಉದ್ಘಾಟನೆಯ ಉದ್ದೇಶವೇನು ?

ಐದು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಎರಡು ಬ್ಯಾಚ್ ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಒಂದು ಶೈಕ್ಷಣಿಕ ಸಂಸ್ಥೆಯಾಗಿ ಡಾ ಬಿ ಆರ್ ಅಂಬೇರ್ಡ್ಕ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ತನ್ನ ಹಿರಿಮೆ ಸಾಧಿಸಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ವಿಸ್ತರಣಾ ಕಾರ್ಯಗಳೂ ನಡೆದಿಲ್ಲ ಅಥವಾ ಕಾಮಗಾರಿಗಳೂ ನಡೆಯುತ್ತಿಲ್ಲ. ಯಾವುದೇ ಹೊಸ ಜ್ಞಾನಶಿಸ್ತಿನ ವಿಭಾಗವನ್ನು ಇಲ್ಲಿ ರೂಪಿಸಲಾಗಿಲ್ಲ. ೨೦೧೭ರಲ್ಲಿ ಆರಂಭವಾದಂತೆಯೇ ಮೂರು ಕೋರ್ಸ್‌ಗಳ ಅವಕಾಶವನ್ನು ಇಂದಿಗೂ ಮುಂದುವರೆಸಲಾಗಿದೆ. ಹೀಗಿರುವಾಗಲೂ ಪ್ರಧಾನಮಂತ್ರಿಗಳಿಂದ ಮರು ಉದ್ಘಾಟನೆ ಮಾಡಿಸುವ ಅವಶ್ಯಕತೆ ಏನಿತ್ತು ಎನ್ನುವುದು ಜಿಜ್ಞಾಸೆಯಾಗಿಯೇ ಉಳಿಯಲಿದೆ.

ಶಿಕ್ಷಣ ಮತ್ತು ಜ್ಞಾನ ಪರಂಪರೆಯನ್ನು ಸಂಪೂರ್ಣ ಖಾಸಗೀಕರಣಕ್ಕೊಳಪಡಿಸಿ, ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ಶಿಕ್ಷಣ ಕ್ಷೇತ್ರವನ್ನು ಆಕ್ರಮಿಸಲು ಸಕಲ ಅವಕಾಶವನ್ನೂ ನೀಡಲಾಗುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸರ್ಕಾರದಿಂದಲೇ ಸ್ಥಾಪಿಸಲಾದ ವಿಶ್ವವಿದ್ಯಾಲಯವನ್ನು ಮರು ಉದ್ಘಾಟನೆ ಮಾಡುವುದು ವಿಡಂಬನೆಯಾಗಿ ಕಾಣುತ್ತದೆ. ಶಿಷ್ಟಾಚಾರದ ದೃಷ್ಟಿಯಿಂದ ನೋಡಿದಾಗಲೂ ರಾಜ್ಯ ಸರ್ಕಾರದ ಈ ನಡೆ ಪ್ರಶ್ನಾರ್ಹವೇ ಆಗುತ್ತದೆ. ಒಂದು ಹೊಸ ಶೈಕ್ಷಣಿಕ ಸಂಸ್ಥೆಯನ್ನಾದರೂ ಸ್ಥಾಪಿಸಿ, ಅದರ ಶಂಕುಸ್ಥಾಪನೆಯನ್ನು ಪ್ರಧಾನಿಗಳಿಂದ ಮಾಡಿಸಿದ್ದರೆ ಸಾರ್ಥಕ ಎನಿಸುತ್ತಿತ್ತು.

ಈ ಜಿಜ್ಞಾಸೆಗಳ ನಡುವೆಯೇ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಾಗಲಿ ಎಂದು ಆಶಿಸಬಹುದಷ್ಟೇ. ಬಹುಶಃ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವೂ ಇದೇ ಆಗಿರಬಹುದು!

andolana

Recent Posts

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

2 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

5 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago