• ಪ್ರಶಾಂತ್ ಎಸ್.
ಸಾಧನೆ ಮಾಡುವ ಹಂಬಲವಿದ್ದರೆ ದೇಹದಲ್ಲಿನ ನ್ಯೂನತೆಗಳು, ಸಾಮಾಜಿಕವಾಗಿ ಎದುರಾಗುವ ಸಮಸ್ಯೆ ಸವಾಲುಗಳು ಲೆಕ್ಕವಿರುವುದಿಲ್ಲ. ಗಮನ ಗುರಿಯೆಡೆಗಿದ್ದರೆ ಸಾಧನೆಯ ಹಾದಿ ಹತ್ತಿರವಾಗುತ್ತದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನು ಲೆಕ್ಕಿಸದೆ ಯುವತಿಯೊಬ್ಬಳು ಯೋಗಾ ಭ್ಯಾಸ ಮಾಡಿ ಯೋಗಪಟುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಮಾದರಿಯಾಗಿದೆ.
ಮೈಸೂರಿನ ಎಚ್.ಖುಷಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಾಪಟು ವಾಗಿ ಗುರುತಿಸಿಕೊಂಡಿದ್ದು, ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಜತೆಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನೂ ಪಡೆಯುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ.
ಮೂಲತಃ ಮೈಸೂರಿನ ಹೆಬ್ಬಾಳ ಎರಡನೇ ಹಂತದ ನಿವಾಸಿ ಹೇಮಚಂದ್ರ ಮತ್ತು ಕುಮುದಾ ದಂಪತಿಯ ಮಗಳಾದ ಎಚ್.ಖುಷಿ ಈಗ ಅಂತಾರಾಷ್ಟ್ರೀಯ ಯೋಗಪಟು. ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ, ಯೋಗ ವೈದ್ಯಕೀಯ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ನ್ಯಾಚುರೋಪತಿ, ಯೋಗಿಕ್ ಸೈನ್ಸ್‌ನಲ್ಲಿ ವೈದ್ಯಕೀಯ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಇವರು ಹತ್ತು ವರ್ಷಗಳಿಂದ ‘ಮೈಸೂರು ವಿವೇಕಾನಂದ ಯೋಗ ಮತ್ತು ಸಂಶೋಧನಾ ಸಂಸ್ಥೆ’ಯ ಡಾ.ಪಿ.ಎನ್.ಗಣೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ.
ಖುಷಿಗೆ ಆಗಾಗ್ಗೆ ಕಾಡುತ್ತಿದ್ದ ಉಸಿರಾಟದ ಸಮಸ್ಯೆಯಿಂದಾಗಿ ಅವರು ಹತಾಶರಾಗಿದ್ದರು. ತಮಲ್ಲಿನ ಈ ಸಮಸ್ಯೆ ಎಂದಿಗೂ ತಮ್ಮ ಜೀವನಕ್ಕೆ ಮುಳುವಾಗಬಾರದು ಎಂದು ಯೋಗಾಭ್ಯಾಸ ಆರಂಭಿಸಿದರು. ನಿತ್ಯ 3 ಗಂಟೆಗಳ ಕಾಲ ಯೋಗಾಭ್ಯಾಸ ಮಾಡುತ್ತಿದ್ದು, ಇಂದು ಹೆಚ್ಚಿನ ಸಂಖ್ಯೆಯ ‘ಬ್ಯಾಕ್ ಪ್ಲಾಂಕ್ ರಿಕ್ಷೆನ್ ಕ್ರಂಚರ್’ಗಾಗಿ ಯೋಗಾಭ್ಯಾಸದಲ್ಲಿ ವಿಶ್ವದಾಖಲೆ ಬರೆದಿದ್ದಾರೆ.
2014ರಲ್ಲಿ ಅವರು ಚೀನಾದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿದರು. ನಂತರ 2016ರಲ್ಲಿ ವಿಯೆಟ್ನಾಂನಲ್ಲಿ ನಡೆದ ಆರನೇ ಏಷ್ಯನ್ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್‌ನ ವಿವಿಧ ಸ್ಪರ್ಧೆಗಳಲ್ಲಿ 2 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. 2017ರಲ್ಲಿ ಸಿಂಗಾಪುರದಲ್ಲಿ ನಡೆದ 7ನೇ ಏಷ್ಯನ್ ಯೋಗ ಚಾಂಪಿಯನ್ ಶಿಪ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿ 4 ಚಿನ್ನ ಮತ್ತು 1 ಬೆಳ್ಳಿ ಪದಕಗಳನ್ನೂ, 2018ರಲ್ಲಿ ಅರ್ಜೆಂಟೀನಾದಲ್ಲಿ ನಡೆದ ವಿಶ್ವಯೋಗ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು, 2018ರಲ್ಲಿ ಕೇರಳದಲ್ಲಿ ನಡೆದ 8ನೇ ಏಷ್ಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ 1 ಚಿನ್ನ ಮತ್ತು 1 ಬೆಳ್ಳಿ ಪದಕವನ್ನು, 2019ರಲ್ಲಿ ನಡೆದ 9ನೇ ಏಷ್ಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ, ಕೊರಿಯಾದಲ್ಲಿ 3 ಚಿನ್ನದ ಪದಕಗಳನ್ನು, 2019ರಲ್ಲಿ ಕೋಲ್ಕತ್ತಾ ನಡೆದ ಸ್ಕೂಲ್ ಗೇಮ್ಸ್ ಫೆಡರೇಷನ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಕಂಚಿನ ಪದಕ, 2018ರಲ್ಲಿ ಪ್ರದರ್ಶಕರಾಗಿ ಅವರು ದುಬೈನಲ್ಲಿರುವ ಅಂಬಾಸಿಡರ್ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಿಗೆ ವಿವೇಕಾನಂದ ಯೋಗ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಕಾರ್ಯಾಗಾರದಲ್ಲಿ ಭಾಗವಹಿಸಿದರು.
prashanthsmysore@gmail.com
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…