Mysore
25
overcast clouds
Light
Dark

ಅರಿಶಿನ ಮಿಶ್ರಿತ ಬಿಸಿ ನೀರು

• ಎಸ್.ಹರ್ಷಿತಾ

ನನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜತೆಗೆ ಆರೋಗ್ಯವನ್ನು ಕಾಪಾಡಿಕೊಂಡು ನನ್ನ ಚರ್ಮದ ಕಾಂತಿಯನ್ನೂ ಹೆಚ್ಚಿಸಿಕೊಳ್ಳಲು ಪ್ರತಿದಿನ ಮುಂಜಾನೆ ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕಿ ಅರಿಶಿನ ಜೊತೆಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿಯುತ್ತೇನೆ. ಅರಿಶಿನ ಮಿಶ್ರಿತ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜತೆಗೆ ದೇಹದಲ್ಲಿನ ಕಲ್ಮಶವನ್ನೂ ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅಲ್ಲದೆ ಕೀಲು ನೋವಗಳನ್ನೂ ನಿವಾರಿಸುತ್ತದೆ.

ಇದರೊಂದಿಗೆ ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಅರಿಶಿನದಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣವು ಒಟ್ಟಾರೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಇದರೊಂದಿಗೆ ಅರಿಶಿನ ಮಿಶ್ರಿತ ನೀರು ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ. ಗಮನಿಸ ಬೇಕಾದ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಇದು ಸುಧಾರಿಸುತ್ತದೆ. ಇದರೊಂದಿಗೆ ನಮ್ಮ ಚರ್ಮಕ್ಕೂ ಇದು ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ದೂರವಿರಬಹುದು. (ಹರ್ಷಿತಾ ಅವರು ಮೈಸೂರಿನಲ್ಲಿ ಜಿಮ್ ನಡೆಸುತ್ತಿದ್ದಾರೆ)

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ