ಅಂಕಣಗಳು

ಇಸ್ರೋದಲ್ಲಿ ಛಾಪು ಮೂಡಿಸಿದ ಕಸ್ತೂರಿ ರಂಗನ್; ಶೈಕ್ಷಣಿಕ ಸುಧಾರಣೆಗಳ ಹರಿಕಾರ

ಬೆಂಗಳೂರು: ಕೇರಳ ಮೂಲದ ಬಾಹ್ಯಾಕಾಶ ವಿಜ್ಞಾನಿ, ಪರಿಸರ ತಜ್ಞ ಡಾ. ಕೆ. ಕಸ್ತೂರಿರಂಗನ್ ಅವರು ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.

1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಕೃಷ್ಣಸ್ವಾಮಿ ಅಯ್ಯರ್ ಮತ್ತು ವಿಶಾಲಾಕ್ಷಿ ದಂಪತಿಯ ಪುತ್ರರಾಗಿ ಕಸ್ತೂರಿ ರಂಗನ್ ಜನಿಸಿದರು. ಕಸ್ತೂರಿ ರಂಗನ್ ಅವರ ಪೋಷಕರು ತಮಿಳುನಾಡಿನಿಂದ ಕೇರಳಕ್ಕೆ ಸ್ಥಳಾಂತರಗೊಂಡಾಗ ಪಾಲ್ಕಾಡ್ ಜಿಲ್ಲೆಯ ನಲ್ಲೆಪಲ್ಲಿ ಅಗ್ರಹಾರಂನಲ್ಲಿ ನೆಲೆಸಿದ್ದರು. ಇಸ್ರೋ ನಿವೃತ್ತಿ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು.

ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರು. 2003-2009ರವೆಗೆ ರಾಜ್ಯಸಭಾ ಸದಸ್ಯರಾಗಿ ದ್ದರು. ದೇಶದ ಅತ್ಯುನ್ಯತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮ ವಿಭೂಷಣ (2000) ಪಡೆದುಕೊಂಡಿದ್ದರು.

ಕಸ್ತೂರಿ ರಂಗನ್ ಪ್ರಮುಖ ಕೊಡುಗೆಗಳು: ಈ ಹಿಂದೆ ಅವರು ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದರು ಮತ್ತು ಆಧುನಿಕ ಯುಗದ ಬಾಹ್ಯಾಕಾಶ ನೌಕೆ, ಭಾರತೀಯ ರಾಷ್ಟ್ರೀಯ ಉಪ ಗ್ರಹ (ಇನ್ಸಾಟ್-2) ಮತ್ತು ಭಾರತೀಯ ದೂರ ಗ್ರಾಹಿ ಉಪಗ್ರಹಗಳು (ಐಆರ್‌ಎಸ್-1ಎ ಮತ್ತು 1ಬಿ) ಜೊತೆಗೆ ವೈಜ್ಞಾನಿಕ ಉಪಗ್ರಹಗಳ ಅಭಿವೃದ್ಧಿ ಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದರು. ಇವರ ನಾಯಕತ್ವದಲ್ಲಿ, ಭಾರತದ ಹೆಸರಾಂತ ಉಡಾವಣಾ ವಾಹನಗಳಾದ ಪೋಲಾರ್ ಉಪಗ್ರಹ ಉಡಾವಣಾ ವಾಹನ ಮತ್ತು ಜಿಯೋಸಿಂ ಕ್ರೋನಸ್ ಉಪಗ್ರಹ ಉಡಾವಣಾ ವಾಹನದ ಉಡಾವಣೆ ಮತ್ತು ಕಾರ್ಯನಿರ್ವಹಣೆಯನ್ನು ಒಳಗೊಂಡು ಹಲವು ಪ್ರಮುಖ ಸಾಧನೆಗಳನ್ನು ಕೈಗೊಳ್ಳಲಾಗಿತ್ತು. ಜಿಎಸ್‌ಎಲ್‌ವಿ, ಜಿಎಸ್‌ಎಲ್‌ವಿಎಂಕೆ ಸುಧಾರಿತ ಆವೃತ್ತಿ ಮತ್ತು ಅದರ ಸಂಪೂರ್ಣ ವಿನ್ಯಾಸಗಳ ವ್ಯಾಖ್ಯಾನಗಳ ಅಧ್ಯಯನಗಳನ್ನು ಕೂಡ ಪೂರ್ಣಗೊಳಿಸಲಾಗಿತ್ತು.

ಶಿಕ್ಷಣ ಮತ್ತು ಸಂಶೋಧನೆ ಡಾ. ಕೆ. ಕಸ್ತೂರಿ ರಂಗನ್ ಅವರು ವಿಜ್ಞಾನದಲ್ಲಿ ವಿಶೇಷ ಪದವಿ ಯನ್ನು ಪಡೆದರು ಮತ್ತು ಬಾಂಬೆ ವಿಶ್ವ ವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ವಿಜ್ಞಾನ ಪದವಿಯನ್ನು ಪಡೆದಿದ್ದರು. ಫಿಸಿಕಲ್ ರಿಸರ್ಜ್ ಲ್ಯಾಬೋರೇಟರಿ ಅಹಮದಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಾ 1971ರಲ್ಲಿ ಎಕ್ಸ್ ಪರಿಮೆಂಟಲ್ ಹೈ ಎನರ್ಜಿಯಲ್ಲಿ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ್ದರು.

ಭೌತ ವಿಜ್ಞಾನಿಯಾಗಿ, ಕಸ್ತೂರಿ ರಂಗನ್ ಅವರ ಸಂಶೋಧನಾ ಆಸಕ್ತಿಗಳಲ್ಲಿ ಹೆಚ್ಚು ಸಾಮಥ್ರ್ಯದ ಎಕ್ಸ್-ರೇ ಮತ್ತು ಗಾಮಾ ಕಿರಣಗಳ ಖಗೋಳ ವಿಜ್ಞಾನ ಹಾಗೂ ಆಪ್ಟಿಕಲ್ ಖಗೋಳ ವಿಜ್ಞಾನಗಳು ಸೇರಿವೆ. ಇವರು ಖಗೋಳ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ ಮತ್ತು ಬಾಹ್ಯಾಕಾಶ ಅನ್ವಯಿಸುವಿಕೆಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ 224 ಕ್ಕೂ ಹೆಚ್ಚು ಪ್ರಬಂಧಗಳನ್ನು ಪ್ರಕಟಿಸಿದ್ದರು. ಕಸ್ತೂರಿ ರಂಗನ್ ಅವರು 16 ವಿಶ್ವವಿದ್ಯಾನಿಲಯಗಳಿಂದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದರು. ಫ್ರಾನ್ಸ್‌ನ ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಿಂದ ‘ಆಫೀಸರ್ ಆಫ್ ದಿ ಲೀಜನ್ ದಿ ಹಾನರ್’ (2002) ಪ್ರಶಸ್ತಿ ಒಲಿದಿತ್ತು.

ಶೈಕ್ಷಣಿಕ ಸುಧಾರಣೆಗಳ ಹರಿಕಾರ: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಟ್ಟಿ ಮಾಡಲಾದ ಶೈಕ್ಷಣಿಕ ಸುಧಾರಣೆಗಳ ಹಿಂದಿನ ವ್ಯಕ್ತಿ ಕಸ್ತೂರಿ ರಂಗನ್. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2003ರಿಂದ 2009ರವರೆಗೆ ರಾಜ್ಯಸಭೆಯ ಸದಸ್ಯರಾಗಿ ಮತ್ತು ಅಂದಿನ ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ಅವರು ಅಧ್ಯಯನ ನಡೆಸಿದ್ದ ನೀಡಿದ್ದ ವರದಿ ಸಾಕಷ್ಟು ಚರ್ಚೆಯಾಗಿತ್ತು. ಪರ- ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

15 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago